ಐದು ವರ್ಷ ಸಿಎಂ ಸಿದ್ದರಾಮಯ್ಯ | ವರಿಷ್ಠರು ಹೇಳಿದ್ದನ್ನೇ ಹೇಳಿದ್ದೇನೆ: ಎಂ ಬಿ ಪಾಟೀಲ್

Date:

ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಸೋಮವಾರ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ಇದನ್ನೇ ಹೇಳಿರುವೆ. ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನು ನಾನು ಹೇಳಿದ್ದೇನೆ” ಎಂದರು.

“ನಾನು ಪದೇ ಪದೆ ಈ ಬಗ್ಗೆ ಮಾತನಾಡಲಾರೆ. ನಿನ್ನೆ ಮಾಧ್ಯಮದವರು ಸಿದ್ದರಾಮಯ್ಯ ಬದಲಾಗುತ್ತಾರಾ ಎಂದು ಕೇಳಿದರು. ಅದಕ್ಕೆ ಉತ್ತರಿಸಿರುವೆ. ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

“ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಮುಂದುವರಿಯುತ್ತಾರೆ ಎಂದಿದ್ದರು. ಅದನ್ನೂ ನಾನು ಹೇಳಿದ್ದೇನೆ” ಎಂದರು.

ಜಲಸಂಪನ್ಮೂಲ ಖಾತೆ ನಿಮಗೆ ಸಿಗುತ್ತಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಈ ಹಿಂದೆ ಜಲಸಂಪನ್ಮೂಲ ಖಾತೆ ನಿಭಾಯಿಸಿದ್ದೆ. ನನ್ನ ಅಭಿಪ್ರಾಯವನ್ನು ಮುಖ್ಯಮಂತ್ರಿ ಅವರ ಬಳಿ ತಿಳಿಸಿರುವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...