ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡದ ಸಿದ್ದರಾಮಯ್ಯಗೆ ಶಾಪ ತಟ್ಟದೇ ಇರದು : ಭಗವಂತ ಖೂಬಾ

Date:

ಮಹಾರಾಷ್ಟ್ರ ರಾಜ್ಯದ ರೈತರ ಕಷ್ಟವನ್ನು ಅರಿಯಲು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಅತಿವೃಷ್ಟಿಯಾದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ರೈತರ ಸಂಕಷ್ಟ ಅರಿತು ₹31,628 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ, ರಾಜ್ಯದ ಸಿಎಂ ಸಿದ್ದರಾಮಯ್ಯನವರು ಅತಿವೃಷ್ಟಿಯಾದರೂ ಒಮ್ಮೆಯೂ ಅತಿವೃಷ್ಟಿ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಅವರು ಅತಿವೃಷ್ಟಿಯಿಂದ ಬೆಳೆ ಹಾಳಾದ ಪ್ರತಿ ಹೆಕ್ಟೇರ್‌ಗೆ ₹47 ಸಾವಿರ ನಗದು ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲಿನ ಸಿಎಂ ಮಹಾರಾಷ್ಟ್ರ ರೈತರ ಪಾಲಿಗೆ ಬೆಳಕಾಗಿದ್ದಾರೆ, ಇತರೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮಾದರಿಯಾಗಿದ್ದಾರೆ. ರೈತರ ಪರವಾಗಿ ದೇವೇಂದ್ರ ಫಡ್ನವಿಸ್ ಜೀಯವರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼನಮ್ಮ ರಾಜ್ಯದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಎರಡೆರಡು ಬಾರಿ ಹೋಗಿ ಮುಖ್ಯಮಂತ್ರಿಯವರಿಗೆ ಭೇಟಿ ನೀಡಿ ಅತಿವೃಷ್ಟಿಯ ಬಗ್ಗೆ ಗಮನಹರಿಸಿ ಎಂದು ಬೇಡಿಕೊಂಡರು ಬಂದಿರಲಿಲ್ಲ, ಬಿಜೆಪಿ ಪಕ್ಷದಿಂದ ತಂಡ ರಚನೆಯಾದ ವಿಷಯ ತಿಳಿದ ಮೇಲೆ ಆದರೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ, ಕಾಲಹರಣ ಮಾಡುತ್ತಾ ಕುಳಿತಿದ್ದರು, ನಾಮಕೆ ವಾಸ್ತೆ ಒಂದು ದಿನ ಹೇಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿ ಅತಿ ಕಡಿಮೆ ಪರಿಹಾರ ಘೋಷಿಸದ್ದಾರೆʼ ಎಂದರು.

ʼಇಲ್ಲಿಯವರೆಗೆ ಘೋಷಿಸಿರುವ ಪರಿಹಾರ ಬಿಡುಗಡೆ ಮಾಡದೇ ನಮ್ಮ ರೈತರ ಬಾಳಿಗೆ ಕತ್ತಲಾಗಿದ್ದಾರೆ. ರಾಜ್ಯದ ರೈತರ ಬಗ್ಗೆ
ಇಷ್ಟೊಂದು ಅಸಡ್ಡೆ, ಆಲಸ್ಯ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಮತ್ತು ಅವರ ಎಲ್ಲಾ ಉಸ್ತುವಾರಿ ಸಚಿವರುಗಳಿಗೆ ಅನ್ನದಾತರ ಶಾಪ್ ತಟ್ಟದೇ ಇರದುʼ ಎಂದು ಖೂಬಾ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...