ಸಿದ್ದರಾಮಯ್ಯ ಕುಟುಂಬ ಯಾವತ್ತೂ ರಸ್ತೆಗಿಳಿದು ವೋಟ್ ಕೇಳಿರಲಿಲ್ಲ: ವಿ ಸೋಮಣ್ಣ

Date:

  • ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿರುವ ಸಚಿವ ವಿ ಸೋಮಣ್ಣ
  • ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣ ಹೈ ವೋಲ್ಟೇಜ್ ಕ್ಷೇತ್ರ

ಸಿದ್ದರಾಮಯ್ಯ ಅವರ ಕುಟುಂಬ ಎಂದಿಗೂ ರಸ್ತೆಗಿಳಿದು ಮತ ಕೇಳಿರಲಿಲ್ಲ. ಈಗ ಎಲ್ಲ ಕಡೆ ತಿರುಗಾಡಿ ಮತಯಾಚಿಸುತ್ತಿದ್ದಾರೆ ಎಂದು ಸಚಿವ ವಿ ಸೋಮಣ್ಣ ಕುಟುಕಿದ್ದಾರೆ.

ಚಾಮರಾಜನಗರ ತಾಲೂಕು ಕೊತ್ತಲವಾಡಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, “ಒಂದು ಕೊಡ್ರಯ್ಯ ಅಂದ್ರೆ ಎರಡು ಕೊಟ್ಟವ್ರೆ, ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣ ಹೈ ವೋಲ್ಟೇಜ್” ಎಂದು ಹೇಳಿದ್ದಾರೆ.

“ಎರಡು ಕಡೆ ಓಡಾಡುವುದು ಸುಲಭದ ಕೆಲಸವಲ್ಲ, ವರುಣ ಹೈವೋಲ್ಟೇಜ್ ಅಂತ ಅವ್ರು ಹೇಳ್ತಿದ್ರು, ಆದ್ರೆ ಎಂಟೇ ದಿನಕ್ಕೆ ಹೈಯು ಇಲ್ಲ ಪೈಯು ಇಲ್ಲ ಆಗಿದೆ. ಇನ್ನೊಂದು ಮೂರು, ನಾಲ್ಕು ದಿನ ಹೋದ್ರೆ ಎಲ್ಲ ವೋಲ್ಟೇಜ್ ಹೋಗಿ ಅವರು ಏನಾಗುತ್ತಾರೆ ಅಂತ ನೀವೇ ನೋಡಿ” ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗೋವಿಂದರಾಜನಗರ ತಬ್ಬಲಿ ಆಗಿದೆ, ನೂರಾರು ಜನ ಕಾರ್ಯಕರ್ತರು ಇಲ್ಲಿ ಬಂದು ಓಡಾಡುತ್ತಿದ್ದಾರೆ. ವರುಣದಲ್ಲಿ ಸಾವಿರಾರು ಜನರು ಬಂದು ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ.

“ಸಿದ್ದರಾಮಯ್ಯ ಅವರು, ನಾನು ನಾಮಪತ್ರ ಹಾಕಿದ್ರೆ ಮತ್ತೆ ಮತ ಹಾಕುವುದಕ್ಕೆ ಮಾತ್ರ ಬರುತ್ತೇನೆ ಎಂದು ಹೇಳಿದ್ದರು. ಆದರೆ, ಈಗ ಅವರು ಸೋಮವಾರದಿಂದ ವರುಣದಲ್ಲೇ ಇರುತ್ತೇನೆ ಎನ್ನುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಚಾಮರಾಜನಗರ | ಮಾಜಿ ಸಿಎಂಗೆ ಮುಜುಗರ ಆಗಬಾರದೆಂದು ಸಹಿಸಿಕೊಂಡಿದ್ದೇನೆ: ವಿ ಸೋಮಣ್ಣ

“ಸಿದ್ದರಾಮಯ್ಯ ಅವರ ಕುಟುಂಬದವರು ಈಗ ಎಲ್ಲ ಕಡೆ ಮತ ಯಾಚಿಸುತ್ತಿದ್ದಾರೆ. ಇದು ಹೈ ವೋಲ್ಟೇಜ್ ಪ್ರಭಾವ. ವರುಣದಲ್ಲಿ ಒಂದು ದಿನ ಅಲ್ಲ, ದಿನವೂ ನಮ್ಮ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರ ಆಗಬಾರದು ಎಂದು ಸಹಿಸಿಕೊಂಡಿದ್ದೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....