ರಾಯಚೂರು | ಗಣೇಶ ವಿಸರ್ಜನೆ ವೇಳೆ ಗಲಾಟೆ: ಓರ್ವ ಸಾವು

Date:

ಹಳೆ ದ್ವೇಷದ ಹಿನ್ನೆಲೆ ಇಟ್ಟುಕೊಂಡು ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಓರ್ವ ವ್ಯಕ್ತಿ ಕೊಲೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮೂರು ಮೈಲ್‌ ಕ್ಯಾಂಪ್‌ನಲ್ಲಿ ನಡೆದಿದೆ.

- Advertisement -

ಮೂರು ಮೈಲ್ ಕ್ಯಾಂಪ್ ನಿವಾಸಿ ವೀರಬಸಪ್ಪ (60) ಮೃತಪಟ್ಟ ವ್ಯಕ್ತಿ. ಕೆಲವು ದಿನ ಹಿಂದೆ ಪರಶುರಾಮ ಎನ್ನುವ ಯುವಕ ಮದ್ಯಪಾನ ಮಾಡುತ್ತಿದ್ದುದನ್ನು ನೋಡಿದ ಮೃತ ವೀರಬಸಪ್ಪ ಬುದ್ದಿಮಾತು ಹೇಳಲು ಕುಟುಂಬದವರಿಗೆ ವಿಷಯ ತಿಳಿಸಿದ್ದರು. ಇದರಿಂದ ಪರಶುರಾಮ ಕೋಪಗೊಂಡು ಮೃತ ವೀರಬಸಪ್ಪನ ಮೇಲೆ ದ್ವೇಷ ಇಟ್ಟುಕೊಂಡಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶನಿವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮದ್ಯಪಾನದ ವಿಷಯ ಕುರಿತಾಗಿ ಪರಶುರಾಮ ಮತ್ತು ವೀರಬಸಪ್ಪನ ಕುಟುಂಬದವರ ನಡುವೆ ಪ್ರಾರಂಭವಾದ ಕಲಹ ವಿಕೋಪಕ್ಕೆ ತಿರುಗಿದೆ. ಪರಶುರಾಮ, ಮಹೇಶ ಮತ್ತು ಮಂಜು ಎನ್ನುವವರು ವೀರಬಸಪ್ಪನಿಗೆ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪಳ | ಗಣೇಶ ಚತುರ್ಥಿಯ ಮರುದಿನ ಮುಸ್ಲಿಮರ ಈ ಮನೆಯಲ್ಲಿ ಇಲಿ ಪೂಜೆ!

ಘಟನೆಯ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವುಕುಮಾರ, ಡಿವೈಎಸ್‌ಪಿ ಬಿ.ಎಸ್.ತಳವಾರ ಸ್ಥಳಕ್ಕೆ ಭೇಟಿ ನೀಡಿದರು.

ಘಟನೆ ಕುರಿತು ಮಾಹಿತಿ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...