ಬೀದರ್‌ | ನಾಳೆ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಕ್ಫ್ ಬೋರ್ಡ್ ಕಚೇರಿಗೆ ಮುತ್ತಿಗೆ

Date:

ಜಿಲ್ಲೆಯಲ್ಲಿ ರೈತರು, ಮಠಾಧೀಶರ ಜಮೀನು, ಮಠ ಮಂದಿರ ಆಸ್ತಿ ವಕ್ಫ್ ಹೆಸರಿನಲ್ಲಿ ನಮೂದಿಸಲಾಗುತ್ತಿದ್ದು, ಎಲ್ಲರೂ ಹೊಲ, ಆಸ್ತಿಪಾಸ್ತಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಡಿ.4ರಂದು ಬೀದರ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ತಿಳಿಸಿದರು.

- Advertisement -

ಭಾಲ್ಕಿ ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, ʼಜಿಲ್ಲೆಯಲ್ಲಿ ಸುಮಾರು 13 ಸಾವಿರ ಎಕರೆ ಜಮೀನು ವಕ್ಫ್ ಹೆಸರಿನಲ್ಲಿ ನಮೂದಿತ ಆಗಿದೆ. ಪುರಾತನ ಪಾಪನಾಶ, ಬಸವಗಿರಿ ಮುಂತಾದ ಮಠ ಮಂದಿರ ಜಮೀನು ವಕ್ಫ್ ಬೋರ್ಡ್‌ನಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ಆದರೆ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್ ಅವರು ವಕ್ಫ್ ವಿರುದ್ಧ ಧ್ವನಿಯೆತ್ತುತ್ತಿಲ್ಲʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಸಿಎಂ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ ಅಹ್ಮದ್ ಸೇರಿ ಕಾಂಗ್ರೆಸ್ ಸರಕಾರ ಕೇವಲ ಒಂದು ಸಮುದಾಯವನ್ನು ಒಲೈಸುವ ಪ್ರಯತ್ನ ಮಾಡುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ. ಇದೇ ವಿಚಾರವಾಗಿ ರೈತರು, ಮಠಾಧೀಶರನ್ನು ಮಾತನಾಡಿಸಿ, ಧೈರ್ಯ ತುಂಬಲು ಬೀದರ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿದ್ದಾರೆʼ ಎಂದರು.

ʼನಾಳೆ ಬೆಳಿಗ್ಗೆ 11ಕ್ಕೆ ಗಾಂಧಿ ಗಂಜ್‌ನ ಬಸವೇಶ್ವರ ದೇವಸ್ಥಾನದಲ್ಲಿ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ನಗರದ ವಿವಿಧ ವೃತ್ತಗಳ ಮೂಲಕ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ವಕ್ಫ್ ಬೋರ್ಡ್‌ಗೆ ಮುತ್ತಿಗೆ ಹಾಕಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ರೈತರು, ಮಠಾಧೀಶರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕುʼ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ್, ಜಿಪಂ ಮಾಜಿ ಸದಸ್ಯ ವೆಂಕಟ ಬಿರಾದಾರ್, ತಾಲೂಕು ಬಿಜೆಪಿ ಅಧ್ಯಕ್ಷ ವೀರಣ್ಣ ಕಾರಬಾರಿ, ಪಂಡರಿ ಮೇತ್ರೆ, ವೆಂಕಟ ಲಾಳೆ, ಜೈಭೀಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...