ಮಂಡ್ಯ | ರಾಜ್ಯಾದ್ಯಂತ ಸಹಿ ಸಂಗ್ರಹ; ವಕೀಲರ ನಿಯೋಗದಿಂದ ಬೇಡಿಕೆ ಈಡೇರಿಸುವಂತೆ ಮನವಿ

Date:

ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

- Advertisement -

13 ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ, ವಕೀಲರಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ತಮ್ಮ ನಡೆಯನ್ನು ವಿಧಾನಸೌಧ ಹಾಗೂ ವಕೀಲರ ಪರಿಷತ್ ಗಳ ಮುಂದೆ ಹಮ್ಮಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಮನವಿ ಪುರಸ್ಕರಿಸಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಿ. ಟಿ. ವಿಶ್ವನಾಥ್, ರಾಜ್ಯ ಸಮಿತಿ ಸದಸ್ಯರಾದ ಆರ್. ತಿಮ್ಮೆಗೌಡ ಹಾಗೂ ನ್ಯಾಯವಾದಿಗಳಾದ ಎಂ. ಮಹೇಶ್, ಯೋಗೇಶ್, ಸುನಿಲ್, ಕಿಶೋರ್, ಕೆಂಪಯ್ಯ
ಮೊದಲಾದವರು ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರಕ್ಕೆ ಕಳಿಸಿಕೋಡುವಂತೆ ವಿನಂತಿಸಿದರು.

ಹಕ್ಕೋತ್ತಾಯ…….

  • ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ -2024 ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು.
  • ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ (AIBE) ರದ್ದು ಪಡಿಸಬೇಕು.
  • ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ ರೂ.10,000/- ಸ್ಟೈಫಂಡ್ (ಸಹಾಯ ಧನ) ನೀಡಬೇಕು.
  • ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ರೂ.5 ಲಕ್ಷ ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ.10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು.
  • ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈಧ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
  • ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು.
  • ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
  • ರಾಜ್ಯದಲ್ಲಿನ ಎಲ್ಲ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್‌ಗಳನ್ನು ಸ್ಥಾಪಿಸಬೇಕು.
  • ರವೆನ್ಯೂ AC, DC ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವದರಿಂದ ಕಂದಾಯ ಪ್ರಕ್ರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು.
  • ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು.
  • ರಾಜ್ಯದ ಪ್ರತೀ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು ಹಾಗೂ ಈಗಿರುವ ಅನುದಾನಿತ & ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
  • ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಕಛೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಶಾಸಕ ದರ್ಶನ್ ಪುಟ್ಟಣ್ಣಯ್ಯ

  • ವಕೀಲರ ಸಂಘದ/ ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕು. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸರ ಪ್ರಾತಿನಿತ್ಯ ನೀಡಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...