ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 1.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷದ ಇದೇ ದಿನ ಜಿಲ್ಲೆಯಲ್ಲಿ 18.59 ಮಿ.ಮೀ. ಮಳೆಯಾಗಿದ್ದು, ಈ ಬಾರಿ ಮಳೆ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ.
ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 315.13 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 1403.77 ಮಿ.ಮೀ. ಮಳೆಯಾಗಿತ್ತು. ಇದರಿಂದ ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ.
ತಾಲ್ಲೂಕುವಾರು ಮಳೆ ವಿವರದಲ್ಲಿ ವಿರಾಜಪೇಟೆ ತಾಲ್ಲೂಕಿನಲ್ಲಿ 2.80 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 1 ಮಿ.ಮೀ. ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 3.10 ಮಿ.ಮೀ. ಮಳೆಯಾಗಿದೆ. ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕುಗಳಲ್ಲಿ ಗಮನಾರ್ಹ ಮಳೆ ದಾಖಲಾಗಿಲ್ಲ.
ಜನವರಿಯಿಂದ ಇಲ್ಲಿಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 479.72 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 385.99 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 273.19 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 257.88 ಮಿ.ಮೀ. ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 178.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷದ ಇದೇ ಅವಧಿಯೊಂದಿಗೆ ಹೋಲಿಸಿದರೆ ಎಲ್ಲಾ ತಾಲ್ಲೂಕುಗಳಲ್ಲೂ ಮಳೆ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ.
This video cannot be played in your browser. Open the video directly
ಹೋಬಳಿವಾರು ಮಳೆ ವಿವರದಂತೆ ಭಾಗಮಂಡಲದಲ್ಲಿ ಅತ್ಯಧಿಕ 19.60 ಮಿ.ಮೀ. ಮಳೆಯಾಗಿದೆ. ನಾಪೋಕ್ಲು 2.80, ವಿರಾಜಪೇಟೆ 1.60, ಅಮ್ಮತ್ತಿ 4, ಪೊನ್ನಂಪೇಟೆ 1, ಬಾಳೆಲೆ 3.01, ಸೋಮವಾರಪೇಟೆ 1.80, ಶಾಂತಳ್ಳಿ 5, ಕೊಡ್ಲಿಪೇಟೆ 5.60, ಕುಶಾಲನಗರ 1.20 ಹಾಗೂ ಸುಂಟಿಕೊಪ್ಪದಲ್ಲಿ 5 ಮಿ.ಮೀ. ಮಳೆಯಾಗಿದೆ.
ಈ ಸುದ್ದಿ ಓದಿದ್ದೀರಾ?ಕೊಡಗು | ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಜುಲೈ 31ರವರೆಗೆ ನೋಂದಣಿ: ರೈತರಿಗೆ ಮನವಿ
ಹಾರಂಗಿ ಜಲಾಶಯದ ಸ್ಥಿತಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಸೋಮವಾರದಂದು ನೀರಿನ ಮಟ್ಟ 2,826.83 ಅಡಿಗಳಿಗೆ ತಲುಪಿದೆ. ಕಳೆದ ವರ್ಷದ ಇದೇ ದಿನ ಜಲಾಶಯದಲ್ಲಿ 2,850.83 ಅಡಿ ನೀರು ಸಂಗ್ರಹವಾಗಿತ್ತು.
ಹಾರಂಗಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8.40 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷದ ಇದೇ ದಿನ 5.80 ಮಿ.ಮೀ. ಮಳೆಯಾಗಿತ್ತು. ಜಲಾಶಯಕ್ಕೆ ಪ್ರಸ್ತುತ 385 ಕ್ಯುಸೆಕ್ ನೀರು ಒಳಹರಿವು ಬರುತ್ತಿದ್ದು, ಕಳೆದ ವರ್ಷ ಇದೇ ದಿನ 4,431 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಪ್ರಸ್ತುತ ಜಲಾಶಯದಿಂದ ನದಿಗೆ 180 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಳೆದ ವರ್ಷ ಇದೇ ದಿನ 2,500 ಕ್ಯುಸೆಕ್ ನೀರನ್ನು ಹೊರಹರಿಸಲಾಗಿತ್ತು.





