ಸಿಂದಗಿ | ಪಟ್ಟಣದ ಅಭಿವೃದ್ಧಿಗೆ 29 ಕೋಟಿ ಮೀಸಲು: ಶಾಸಕ ಅಶೋಕ ಮನಗೂಳಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಂದು ಮತಕ್ಷೇತ್ರದ ಶಾಸಕ ನಿಧಿಗೆ 50 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರಂತೆ ನಮ್ಮ ಮತಕ್ಷೇತ್ರಕ್ಕೆ ಬರಬಹುದಾದ 50 ಕೋಟಿ ಅನುದಾನದಲ್ಲಿ 29 ಕೋಟಿಯನ್ನು ಸಿಂದಗಿ ಪಟ್ಟಣದ ಅಭಿವೃದ್ಧಿಗೆ ಕಾಯ್ದಿರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಎರಡು ಕೋಟಿ ವೆಚ್ಚದ ಭವನದ ಮುಂದುವರೆದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, “ಪಟ್ಟಣದ 15 ಮತ್ತು 16ನೇ ವಾರ್ಡ್ನ ಪರಿಶಿಷ್ಟ ನಿವಾಸಿ ಕಾಲೋನಿಗಳಲ್ಲಿ ಒಂದು ಕೋಟಿ ವೆಚ್ಚದಲ್ಲಿ ರಸ್ತೆ ಫೇವರ್ಸ್ ಕಾಮಗಾರಿ ಪೂರ್ಣಗೊಂಡಿದೆ. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ನಿವಾಸಿಗಳ ಕಾಲೋನಿಗಳಲ್ಲಿ ಸಿಸಿ ರಸ್ತೆಗಳಿಗಾಗಿ ತಾಂಬಾ ಗ್ರಾಮದಲ್ಲಿ 1 ಕೋಟಿ, ಕುಮಸಗಿ ಗ್ರಾಮದಲ್ಲಿ 50 ಲಕ್ಷ, ನಾಗಾವಿ ಬಿಕೆ, ಬಂಟನೂರ ಗ್ರಾಮಗಳಲ್ಲಿ 50 ಲಕ್ಷ ಅನುದಾನ ಬಿಡುಗಡೆಗೊಂಡಿದೆ. ಇಡೀ ದೇಶದಲ್ಲಿಯೇ ಯಶಸ್ಸಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದಿರುವ ಏಕಮೇವ ರಾಜ್ಯ ನಮ್ಮದಾಗಿದೆ. ಸರ್ಕಾರ ಈ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದೆ ಎಂಬ ವಿರೋಧ ಪಕ್ಷದ ಟೀಕೆ ಸತ್ಯಕ್ಕೆ ದೂರ. ಸಿಂದಗಿ ನಗರಸಭೆಯಾಗಿ ಮೇಲ್ದರ್ಜೆಗೇರಿದೆ. ಇನ್ನು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ಸುಲಭವಾಗುತ್ತದೆ. ಎಲ್ಲ 23 ವಾರ್ಡುಗಳನ್ನು ಮಾದರಿಯಾಗಿ ಅಭಿವೃದ್ಧಿ ಮಾಡಲಾಗುತ್ತದೆ” ಎಂದು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, “ಇಲ್ಲಿಯ ಅಂಬೇಡ್ಕರ್ ಭವನ ನಿರ್ಮಾಣಗೊಂಡು ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಹಿಂದಿನ ಶಾಸಕ ರಮೇಶ ಭೂಸನೂರ ಒಂದು ಕೋಟಿ ಅನುದಾನ ನೀಡಿದ್ದಾರೆ. ಸಿಂದಗಿಯಲ್ಲಿ ನಿರ್ಮಾಣಗೊಳ್ಳುವ ಬುದ್ಧ ವ್ಯವಹಾರಕ್ಕೆ 4 ಕೋಟಿ ಅನುದಾನ ಶಾಸಕ ಬಿಡುಗಡೆಗೊಳಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಸಿಂದಗಿ | ದಲಿತ ವ್ಯಕ್ತಿ ಮಹದೇವಪ್ಪ ಹರಿಜನ ಹತ್ಯೆ ಖಂಡಿಸಿ ಕಾಲ್ನಡಿಗೆ ಜಾಥಾ ಆರಂಭಿಸಿದ ದಸಂಸ

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಸಿ ಮಾದೇವಪ್ಪ ಅವರು ಬಿಡುಗಡೆಗೊಳಿಸಿದ ಎರಡು ಕೋಟಿ ಅನುದಾನದಲ್ಲಿ ಪಟ್ಟಣದ ಅಂಬೇಡ್ಕರ್ ಭವನದ ಆವರಣದಲ್ಲಿ ಅಂಬೇಡ್ಕರ್ ಗ್ಲಾಸ್ ಹೌಸ್ ನಿರ್ಮಾಣಕ್ಕಾಗಿ 1.50 ಕೋಟಿ ಜೊತೆಗೆ 50 ಲಕ್ಷ ವೆಚ್ಚದಲ್ಲಿ ಭವನ ನವೀಕರಣಗೊಳಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ, ಸದಸ್ಯ ರಾಜಣ್ಣ ನಾರಾಯಣಕಾರ, ಬಸವರಾಜ ಯರನಾಳ, ಯಮನಪ್ಪ ಹೊಸಮನಿ, ಚಂದ್ರಮ್ಮ ಜಾವನ್ನವರ, ವಿಠಲ ಹೊಸಮನಿ, ಶರಣಪ್ಪ ಸುಲ್ಫಿ, ದೇವಕಿ ಮಾಣುರ, ನಿರ್ಮಾತಿ ಕೇಂದ್ರದ ಎಇಇ ಅರವಿಂದ ದನಗೊಂಡ ಬಾಲಕೃಷ್ಣ ಚಲವಾದಿ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X