ಸಿಂದಗಿ | ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪ: ಫಾ. ಸಂತೋಷ

Date:

ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪವಾಗಿದ್ದು, ಒಬ್ಬರ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸುತ್ತದೆ ಎಂದು ಫಾ. ಸಂತೋಷ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸಂಗಮ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಯುವಕ ಯುವತಿಯರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಕ್ತದಾನದಿಂದ ದಾನಿಗಳ ಆರೋಗ್ಯ ಉತ್ತಮ ಗೊಳ್ಳುತ್ತದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಹೊಸ ರಕ್ತ ಕಣಗಳ ಉತ್ಪಾದನೆಗೆ ಸಹಕಾರವಾಗುತ್ತದೆ. ರಕ್ತದಾನವು ಸಂಪೂರ್ಣ ಸುರಕ್ಷಿತವಾಗಿದ್ದು, ದಾನಿಗಳಿಗೆ ಯಾವುದೇ ಹಾನಿಯಾಗುವುದಿಲ್ಲ” ಎಂದು ಸರ್ಕಾರಿ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ರೂಪಾಲಿ ಸ್ಪಷ್ಟಪಡಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ಹರ್ಷವರ್ಧನ ಪೂಜಾರಿ ಮಾತನಾಡಿ, “ರಕ್ತದಾನವು ಕೇವಲ ಆರೋಗ್ಯ ಸೇವೆ ಅಷ್ಟೇ ಅಲ್ಲದೆ ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದೆ” ಎಂದು ಹೇಳಿದರು.

ಓಂಕಾರ್ ಕರಿಯರ್ ಅಕಾಡೆಮಿಯ ಶಿಕ್ಷಕ ಪರಶುರಾಮ ಬಿರಾದಾರ ಮಾತನಾಡಿ, ಯುವಕ ಯುವತಿಯರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ತರಬೇತಿ ನೀಡಿದರು. ಮಾಹಿತಿ ಹಕ್ಕು ಅಧಿನಿಯಮ ಉದ್ದೇಶ ಅರ್ಜಿ ಸಲ್ಲಿಸುವ ವಿಧಾನ ಸಮಯ ಮಿತಿ, ಅರ್ಜಿಯ ಪ್ರಕ್ರಿಯೆ ಮತ್ತು ಯುವಕರ ಹಕ್ಕನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಬಹುದು ಎಂಬುದನ್ನು ವಿಸ್ತಾರವಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಶಶಿಕಾಂತ ಪಟ್ಟಣ ಆಗ್ರಹ

ಈ ವೇಳೆ ಆರಿಫಾ ಹವಲ್ದಾರ, ನದಿ ಬೀಳಗಿ, ಮಹೇಶ ಕಟಕದೊಂಡ, ಸರ್ಕಾರಿ ಜಿಲ್ಲಾಸ್ಪತ್ರೆಯ ಪಿಕೆ ಮೈಸೂರ, ಪ್ರಯೋಗ ಶಾಲಾ ತಂತ್ರಜ್ಞರು ತಾಲೂಕು ಆಸ್ಪತ್ರೆ, ಸಿಂದಗಿ ಯುವಕ ಯುವತಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...