ಸಿಂದಗಿ | ದೀಪಾವಳಿ ಧರ್ಮಾಂತರದ ಗಡಿಗಳನ್ನು ಮೀರಿ ಮಾನವೀಯತೆ ಬೆಳಗಬೇಕು: ಶಾಂತಗಂಗಾಧರ ಶ್ರೀ

Date:

ದೀಪಾವಳಿ ಬೆಳಕಿನ ಹಬ್ಬ ಮಾತ್ರವಲ್ಲ, ಅದು ಅಂಧಕಾರದ ಮೇಲೆ ಬೆಳಕಿನ ಜಯ, ದುಷ್ಕೃತ್ಯದ ಮೇಲೆ ಸತ್ಕೃತ್ಯದ ಜಯ ನೀಡುವ ಸಂಕೇತ. ಧರ್ಮಾಂತರದ ಗಡಿಗಳನ್ನು ಮೀರಿ ಮಾನವೀಯತೆ ಬೆಳಗಬೇಕಾಗಿದೆ ಎಂದು ಶಾಂತಗಂಗಾಧರ ಶ್ರೀ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಂಗಮ ಸಮಗ್ರ ಅಭಿವೃದ್ಧಿ ಕೇಂದ್ರ ಹಾಗೂ ಯುವಕ ಸಂಘ ಕನ್ನೊಳ್ಳಯ ದೊಡ್ಡಪ್ಪ ಮಹಾರಾಜ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸ್ನೇಹ ಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ ಅವರು ಶಾಂತಿಯ ಸಂದೇಶ ಹಂಚಿಕೊಂಡರು.

ಇಸ್ಲಾಂ ಧರ್ಮ ಗುರುಗಳಾದ ಹಾಜಿ ಕೋಟ್ಯಾಳ ಅವರು ಮಾತನಾಡಿ, “ಎಲ್ಲರೂ ಒಟ್ಟಾಗಿ ಬಾಳಬೇಕು. ಶಾಂತಿಯುತವಾಗಿ ಬಾಳುವುದೇ ಎಲ್ಲ ಧರ್ಮಗಳ ಸಂದೇಶವಾಗಿದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಎಲ್ಲರೂ ಸೇರಿ ದೀಪ ಹಚ್ಚಿ ಶಾಂತಿ ಮತ್ತು ಸಹಕಾರದ ಸಂಕೇತವನ್ನು ಪ್ರದರ್ಶಿಸಿದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.

ಕಾರ್ಯಕ್ರಮದಲ್ಲಿ ಹಲವಾರು ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಂತರ್‌ಧರ್ಮೀಯ ಏಕತೆಗೆ ಮಾದರಿಯಾಗಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರು: ಸಚಿವ ದಿನೇಶ್ ಗುಂಡೂರಾವ್

ಈ ಕಾರ್ಯಕ್ರಮದಲ್ಲಿ ಲೋಯೋಲಾ ಶಾಲೆಯ ಪ್ರಾಂಶುಪಾಲರು ಮತ್ತು ಆಡಳಿತ ನಿರ್ವಹಣೆಗಾರರಾದ ಫಾದರ್ ಜೀವನ ಅವರು ಮಾತನಾಡಿ, ದೀಪಾವಳಿ ಹಬ್ಬವು ಬೆಳಕಿನ ಹಬ್ಬ ನಾವೆಲ್ಲರೂ ಸೇರಿ ಆಚರಿಸಿ ಜಗತ್ತಿಗೆ ಶಾಂತಿಯನ್ನು ಸಾರೋಣ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಗುರಿ ಹಿರಿಯರು ಹಾಗೂ ಯುವಕ ಸಂಘಟನೆಯ ಕಾರ್ಯಕರ್ತರು, ಸಂಗಮ ಸಂಸ್ಥೆಯ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...