ಬೀದರ್‌ | ಅವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಸಿಂಧನಕೇರಾ ಗ್ರಾಮಸ್ಥರ ಆಗ್ರಹ

Date:

Advertisements

ಹುಮನಾಬಾದ್‌ ತಾಲೂಕಿನ ಸಿಂಧನಕೇರಾ ಗ್ರಾಮದಲ್ಲಿ ಅವೈಜ್ಞಾನಿಕವಾಗಿರುವ ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಲ್ಲಿ ಅನಾರೋಗ್ಯದ ಭೀತಿ ಉಂಟಾಗಿದೆ. ಕೂಡಲೇ ಘಟಕ ಸ್ಥಳಾಂತರಿಸಿ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಈ ಕುರಿತು ಶನಿವಾರ ಹುಮನಾಬಾದ್‌ ತಾಲೂಕು ಪಂಚಾಯತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗ್ರಾಮಸ್ಥರು ಹುಮನಾಬಾದ್‌ ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಭೀಮರಾವ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಸಿಂಧನಕೇರಾ ಗ್ರಾಮದ ಸಮೀಪದಲ್ಲೇ ಇರುವ ಖಾಲಿ ಜಾಗದಲ್ಲಿ ಹುಮನಾಬಾದ್‌ ಪುರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಇಲ್ಲಿನ ಘಟಕಕ್ಕೆ ತಂದು ಹಾಕುತ್ತಾರೆ. ಇದರಿಂದ ದ್ರವ ರೂಪದ ತ್ಯಾಜ್ಯ, ಸತ್ತ ಪ್ರಾಣಿಗಳ ಗಬ್ಬು ವಾಸನೆ ನಾರುತ್ತಿದ್ದು, ಜನರಿಗೆ ಓಡಾಡಲು ತೊಂದರೆ ಆಗುತ್ತಿದೆ. ಸೊಳ್ಳೆ ಕಾಟದಿಂದ ಜನರಿಗೆ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ ಎಂದು ದೂರಿದರು.

Advertisements

ತ್ಯಾಜ್ಯ ವಿಲೇವಾರಿ ಘಟಕ ಕೇವಲ ಗ್ರಾಮದಿಂದ 200 ಮೀಟರ್ ದೂರದಲ್ಲಿ ಇರುವುದ್ದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಡಿ.9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಈ ವಿಷಯದ ಕುರಿತು ಸದನದಲ್ಲಿ ಧ್ವನಿಯೆತ್ತಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಳಿಗಾಲ ಅಧಿವೇಶನ | ನಾಲ್ಕು ದಿನ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ: ಸಭಾಪತಿ ಹೊರಟ್ಟಿ

ಈ ವೇಳೆ ಗ್ರಾಮಸ್ಥರಾದ ಯುವರಾಜ್ ಎಸ್. ಐಹೊಳ್ಳಿ, ಗುರು ಪಾಟೀಲ್, ಶೇಖ್ ಮಕ್ಸುದ್, ಅನಿಲ್ ದೊಡ್ಡಿ, ರೇವಣಪ್ಪ ಮರ್ಕಲ್, ಮಂಜುನಾಥ್ ಕಾಡವಾದಿ, ರಾಜು ಪಾಟೀಲ್, ನವೀನ್ ಹವನಾಯಕ್, ಅಣವೀರ್, ಉಮೇಶ್ ದಾಡಗಿ, ಅರುಣ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X