ಸಿಂಧನೂರು | ಗಾಂಜಾ–ಮಾದಕ ವಸ್ತುಗಳ ಹಾವಳಿ ತಡೆಗೆ, ಕಠಿಣ ಕ್ರಮಕ್ಕೆ ಶಾಸಕರಿಗೆ ಮನವಿ

Date:

ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಯುವಜನರು ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಕ ದ್ರವ್ಯ ನಿರ್ಮೂಲನಾ ಒಕ್ಕೂಟದಿಂದ ಬುಧವಾರ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

- Advertisement -

ನಗರದಲ್ಲಿನ ವಿವಿಧ ವಾರ್ಡುಗಳು, ನಗರಕ್ಕೆ ಹೊಂದಿಕೊಂಡ ನಿರ್ಜನ ಪ್ರದೇಶಗಳು ಹಾಗೂ ಇತರೆಡೆಗಳಲ್ಲಿ ಗಾಂಜಾ ಪ್ಯಾಕೆಟ್‌ಗಳನ್ನು ತಯಾರಿಸಿ, ಅಕ್ರಮವಾಗಿ ವ್ಯಸನಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಯುವಕರು ಗಾಂಜಾ ಹಾಗೂ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ಸಾರ್ವಜನಿಕರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದು ಮತ್ತು ಬೈಕ್‌ ಗಳನ್ನು ಮನಬಂದಂತೆ ಚಲಾಯಿಸಿ ಅಪಘಾತಗಳು ಸಂಭವಿಸಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನಗರದ ಕೆಲವು ಕಾಲೋನಿಗಳಾದ ಮಹೆಬೂಬಿಯಾ ಕಾಲೋನಿ, ಶರಣಬಸವೇಶ್ವರ ಕಾಲೋನಿ, ಇಂದಿರಾನಗರ, ಪ್ರಶಾಂತನಗರ, ಖದರಿಯಾ ಕಾಲೋನಿ, ಜವಳಗೇರಾ ಹಾಗೂ ಕೆಲ ಪುನರ್ವಸತಿ ಕ್ಯಾಂಪ್‌ಗಳಲ್ಲಿ ಗಾಂಜಾ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಚಾಕೂಲೇಟ್‌ನಲ್ಲಿ ಮಾದಕ ವಸ್ತುವನ್ನು ಸೇರಿಸಿ ಮಾರಾಟ, ಡ್ರಗ್ಸ್ ಒಳಗೊಂಡ ಇಂಜೆಕ್ಷನ್ ಮಾರಾಟ ಮಾಡಲಾಗುತ್ತಿದೆ ಎಂದು ನಾಗರಿಕರಿಂದ ತಿಳಿದುಬಂದಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇದನ್ನು ತಡೆಯಲು ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ನಾಗರಿಕರು ದೂರಿದರು.

ಗಾಂಜಾ ಮತ್ತು ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ತಾಲ್ಲೂಕಿನ ಅಧಿಕಾರಿಗಳ ಜೊತೆ ಚರ್ಚಿಸಿ ಕಡಿವಾಣಕ್ಕೆ ಮುಂದಾಗಬೇಕು ಎಂದು ಒಕ್ಕೂಟದ ಸಂಚಾಲಕರು ಆಗ್ರಹಿಸಿದರು.

Advertisements

ಈ ಬಗ್ಗೆ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಮಾತನಾಡಿ, ಜನವರಿ ಮೊದಲ ವಾರದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದು ವಿಸ್ತೃತವಾಗಿ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ಒಕ್ಕೂಟದ ಸಂಚಾಲಕರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಬಿಜಿ- ರಾಮಜಿ ಮಸೂದೆ ವಿರೋಧಿಸಿ ಸಂಸದರ ಕಚೇರಿ ಮುಂದೆ ಕೂಲಿಕಾರರ ಪ್ರತಿಭಟನೆ

ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಬಾಬರ್‌ಪಾಷಾ ವಕೀಲರು, ಹುಸೇನ್‌ಸಾಬ್, ಖಾದರ್‌ಸುಬಾನಿ, ಬಸವರಾಜ ಬಾದರ್ಲಿ, ಜಿಲಾನಿಪಾಷಾ, ಚಿಟ್ಟಿಬಾಬು ಬೂದಿವಾಳಕ್ಯಾಂಪ್, ಶಂಕರ ಗುರಿಕಾರ, ಬಸವಂತರಾಯಗೌಡ ಕಲ್ಲೂರು, ರೆಹಮಾನ್‌ಸಾಬ್, ಬಸವರಾಜ ಹಳ್ಳಿ, ಸರ್ಪರಾಜ್‌ಖಾನ್ ಸೇರಿದಂತೆ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...