ಸಿಂಧನೂರು | ಎಸ್‌ಐಆರ್ ನೆಪದಲ್ಲಿ ಮುಸ್ಲಿಂ ಮತದಾರರ ಹೊರಗುಳಿವು; ರಾಜಕೀಯ ದುರುದ್ದೇಶ ಆರೋಪ – ಶಿವಸುಂದರ

Date:

ಎಸ್‌ಐಆರ್ ಪ್ರಕ್ರಿಯೆ ನೆಪದಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ದುರುದ್ದೇಶ ಅಡಗಿದೆ. ತಮ್ಮ ರಾಜಕೀಯ ಲಾಭಕ್ಕೆ ಅನುಕೂಲವಾಗುವಂತೆ ಮತದಾರರ ಯಾದಿ ಸಿದ್ಧಪಡಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ಪ್ರಗತಿಪರ ಚಿಂತಕ ಶಿವಸುಂದರ ಹೇಳಿದರು.

- Advertisement -

ನಗರದ ಟೌನಹಾಲ್‌ ಭವನದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಸಾಧಕ-ಬಾಧಕ ಕುರಿತು ಸಂವಾದ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನುಸುಳುಕೋರರಿಗೆ ಮತದಾನದ ಹಕ್ಕು ನೀಡಬಾರದೆಂಬ ನೆಪದಲ್ಲಿ, ಕೇಂದ್ರ ಸರಕಾರ ಆಡಳಿತಾವಧಿಯಲ್ಲಿ ನುಸುಳಿಕೋರರನ್ನು ಪತ್ತೆ ಹಚ್ಚುವಲ್ಲಿ ಸಾಧ್ಯವಾಗಿಲ್ಲ. ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಪರಿಷ್ಕರಣೆ ಹೆಸರಿನಲ್ಲಿ ಅನ್ಯಾಯ ನಡೆಯುತ್ತಿದೆ ಎಂದರು.

ಭಾರತ ದೇಶದಲ್ಲಿ ಯಾವ ಧರ್ಮದವರಾಗಿರಲಿ, ಯಾವ ಭಾಷೆಯವರಾಗಿರಲಿ, ದಲಿತರಾಗಲಿ, ಮುಸ್ಲಿಮರಾಗಿರಲಿ, ಹಿಂದುಳಿದ ವರ್ಗದವರಾಗಲಿ, ಮಹಿಳೆಯರಾಗಲಿ ಅಥವಾ ಪುರುಷರಾಗಲಿ ಈ ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ನಾಗರಿಕನೇ ಆಗಿದ್ದಾನೆ. ನಾಗರಿಕತ್ವವನ್ನು ಪತ್ತೆಹಚ್ಚುವ ಅಥವಾ ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲವೆಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾಕ್ಟರ್ ಗೆ ಟಿಪ್ಪರ್‌ ಡಿಕ್ಕಿ; ಓರ್ವ ಸಾವು

ಕಾರ್ಯಕ್ರಮದಲ್ಲಿ ಜಮಾತೆ ಇಸ್ಲಾಂ ಹಿಂದ್‌ ಮುಖಂಡ ಹುಸೇನಸಾಬ, ರೈತ ಮುಖಂಡರು ಡಿಎಚ್‌.ಪೂಜಾರ, ಡಿಎಚ್.ಕಂಬಳಿ, ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ ಬಾದರ್ಲಿ, ಚಂದ್ರಶೇಖರ ಗೊರೇಬಾಳ, ಮಕ್ಕಳ ತಜ್ಞ ಡಾ.ಕೆ.ಶಿವರಾಜ್,ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾಧ್ಯಕ್ಷ ಮೌನೇಶ ಜಾಲವಾಡಿಗಿ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...