ಸಿಂಧನೂರು | ಕಳ್ಳತನ ಪ್ರಕರಣ; ಇಬ್ಬರ ಬಂಧನ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಜಪ್ತಿ

Date:

ಸಿಂಧನೂರು ಗ್ರಾಮೀಣ, ತುರ್ವಿಹಾಳ ಠಾಣೆ ಸೇರಿ ಸಿಂಧನೂರು ತಾಲೂಕಿನಲ್ಲಿ ನಡೆದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಹಾಗೂ ಬೈಕ್ ಜಪ್ತಿ ಮಾಡಿದ್ದಾರೆ.

- Advertisement -

ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿ ಜಿಲಾನಿಯನ್ನು ವಶಕ್ಕೆ ಪಡೆದು ರೂ.60 ಸಾವಿರ ಮೌಲ್ಯದ 5 ಗ್ರಾಂ ಬಂಗಾರದ ನತ್ತು, 60 ಸಾವಿರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಕಳ್ಳತನ ಮಾಡಲು ಉಪಯೋಗಿಸಿದ ಹೊಂಡಾ ಯೂನಿಕಾರ್ನ್ ಬೈಕ್ ಸೇರಿ ಒಟ್ಟು ರೂ.1.50 ಲಕ್ಷ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ತಾಲೂಕಿನ ಸುಂಕನೂರು ಗ್ರಾಮದ ಶಿವರಾಜ ಹನುಮಮ್ಮ ಎಂಬ ಆರೋಪಿಯನ್ನು ಬಂಧಿಸಿ, 2 ತೊಲೆ ಬಂಗಾರದ ಆಭರಣ, 15 ತೊಲೆ ಬೆಳ್ಳಿಯ ಆಭರಣ ಸೇರಿ ಒಟ್ಟು 2.50 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | 16 ವರ್ಷಗಳ ಬಾಕಿ ಬಿಲ್ ಪ್ರಕರಣ; ಜಿ.ಪಂ. ಸಿಇಒ ಕಾರು ಜಪ್ತಿ ಆದೇಶದ ಬಳಿಕ ಒಂದೇ ದಿನದಲ್ಲಿ ಪಾವತಿ

ಮೂರು ಪ್ರಕರಣಗಳಲ್ಲಿ ಒಟ್ಟು ರೂ.4 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಸಿಂಧನೂರು ಡಿವೈಎಸ್‍ಪಿ ಚಂದ್ರಶೇಖರ.ಜಿ ನೇತೃತ್ವದಲ್ಲಿ ಸಿಪಿಐ ವಿನಾಯಕ, ಗ್ರಾಮೀಣ ಠಾಣೆ ಪಿಎಸ್‌ಐ ಮೌನೇಶ ರಾಠೋಡ್, ಬಳಗಾನೂರು ಠಾಣೆ ಪಿಎಸ್‌ಐ ಎರಿಯಪ್ಪ ಅಂಗಡಿ, ತುರ್ವಿಹಾಳ ಪಿಎಸ್‌ಐ ಸುಜಾತ, ಎಎಸ್ಐ ದೌಲತ್‍ಸಾಬ್, ಗೋಪಾಲ, ಬಸವರಾಜ, ಹಫೀಜುಲ್ಲಾ, ಅಮರೇಶ, ಮಹೇಶಬಾಬು ಅವರಿದ್ದ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ತಂಡದಿಂದ ವಿಶೇಷ ಕಾರ್ಯಾಚರಣೆ ನಡೆಸಿ ಫೆ.13ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಅವರು ಶ್ಲಾಘಿಸಿದ್ದಾರೆ.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...