ಸಿಂಧನೂರು | ಕಳ್ಳತನ ಪ್ರಕರಣ ; ನಾಲ್ವರಿಗೆ 10 ವರ್ಷ ಜೈಲು ಶಿಕ್ಷೆ

Date:

ಆಂಧ್ರ ಪ್ರದೇಶ ಮೂಲದ ನಾಲ್ವರು ವ್ಯಕ್ತಿಗಳು ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಕಂಡುಬಂದಿದ್ದು, 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ರೂ.1 ಲಕ್ಷ ದಂಡವನ್ನು ವಿಧಿಸಿ ಸಿಂಧನೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

- Advertisement -

ಆಂಧ್ರಪ್ರದೇಶದ ತೋಟಾ ರಾಮಕೃಷ್ಣಂ ರಾಜು, ಸದ್ದಲ ಕುಮಾರ ರಾಜ, ಆರ್ಧಾಣಿ ಲಕ್ಷ್ಮಣ ಹಾಗೂ ಸುಜಾತ ಶಿಕ್ಷೆಗೊಳಗಾದ ಅಪರಾಧಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಘಟನೆಯ ವಿವರ : 2022ರ ನವೆಂಬರ್ 8ರಂದು ಬೆಳಗಿನ ಜಾವ ಆರೋಪಿತರು ಗಾಂಧಿ ನಗರದಲ್ಲಿರುವ ಭಾಸ್ಕರರವರ ಮನೆಗೆ ನುಗ್ಗಿ ದರೋಡೆ ನಡೆಸಿದ್ದರು. ಕಬ್ಬಿಣದ ರಾಡಿನಿಂದ ಬಾಗಿಲು ಒಡೆದು ಒಳನುಗ್ಗಿದ ಆರೋಪಿತರು ಮನೆಯಲ್ಲಿ ಮಲಗಿದ್ದ ಕೃಷ್ಣ ಸಾಯಿ ಮತ್ತು ಧನಲಕ್ಷ್ಮಿ ಇವರನ್ನು ಬೆದರಿಸಿ ಕೀ ಪಡೆದು, ಅಲ್ಮಾರಿಯಿಂದ 218 ಗ್ರಾಂ ಬಂಗಾರ ಕದ್ದೊಯ್ದಿದ್ದರು.

ಇದಲ್ಲದೆ, ಸಾಕ್ಷಿದಾರರನ್ನು ಟವಲ್‌ನಿಂದ ಕೈಕಟ್ಟಿ ಮತ್ತೊಬ್ಬ ಮಹಿಳೆ ಚಂದ್ರಕಲಾ ಅವರನ್ನು ಹೆದರಿಸಿ, ಮನೆ ಮಾಲೀಕರಾದ ಭಾಸ್ಕರರವರ ಮೇಲೆ ಹಲ್ಲೆ ನಡೆಸಿದ್ದರು. ಶಬ್ದ ಕೇಳಿ ನೆರೆಯವರು ಬಂದುಬಿಟ್ಟುದರಿಂದ ಆರೋಪಿ ಬಳಗ ದರೋಡೆ ಮಾಡಿದ ಆಭರಣಗಳೊಂದಿಗೆ ಪರಾರಿಯಾಗಿತ್ತು.

Advertisements

ತುರುವಿಹಾಳ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು, ಅಂದಿನ ತನಿಖಾಧಿಕಾರಿಗಳಾದ ಚಂದ್ರಪ್ಪ ಪಿ.ಎಸ್.ಐ ಹಾಗೂ ರವಿಕುಮಾರ ಸಿ.ಪಿ.ಐ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಶ್ರೀ ಬಿ.ಬಿ. ಜಕಾತಿ, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು (ಸಿಂಧನೂರು ಪೀಠಾಸೀನ), ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಗಳು ಅಪರಾಧ ಎಸಗಿದ್ದಾರೆಂದು ಪರಿಗಣಿಸಿ ಶಿಕ್ಷೆ ವಿಧಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈಲಿನಿಂದ ಇಳಿಯುವಾಗ ಬಿದ್ದು : ಕಾರ್ಮಿಕ ಸಾವು

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಆರ್.ಎ. ಗಡಕರಿ ಸಾಕ್ಷಿ ವಿಚಾರಣೆ ನಡೆಸಿದ್ದು, ಮಂಜುನಾಥ್ ಬೇರಿ ವಾದ ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...