ಬೆಳಗಾವಿ ಶಾಲೆಯ ಘಟನೆ ಮುಸ್ಲಿಂ ದ್ವೇಷದ ಪರಮಾವಧಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಎಸ್‌ಐಓ ಒತ್ತಾಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಿಸುವ ದುರುದ್ದೇಶದಿಂದ ಕಿಡಿಗೇಡಿಗಳು ರೂಪಿಸಿದ ಸಂಚು ಅತ್ಯಂತ ಆಘಾತಕಾರಿಯಾಗಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿ ಮುಗ್ಧ ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿರುವ ಈ ಘೋರ ಕೃತ್ಯವನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ಕರ್ನಾಟಕ ಘಟಕ ಖಂಡಿಸಿದೆ.

- Advertisement -

ಕಳೆದ 13 ವರ್ಷಗಳಿಂದ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯೋಪಾಧ್ಯಾಯರಾದ ಸುಲೇಮಾನ್ ಗೋರಿನಾಯಕ್ ಅವರನ್ನು ಕೇವಲ ಧರ್ಮದ ಕಾರಣಕ್ಕೆ ಗುರಿಯಾಗಿಸಿ, ಅವರನ್ನು ಅಲ್ಲಿಂದ ಸ್ಥಳಾಂತರಿಸಲು 41 ಮುಗ್ಧ ಮಕ್ಕಳನ್ನು ಕೊಲ್ಲಲು ಯತ್ನಿಸಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಕೃತ್ಯವಾಗಿದೆ. ವಿಷ ಬೆರೆಸಿದ ನೀರನ್ನು ಕುಡಿದು 12 ಮಕ್ಕಳು ಅಸ್ವಸ್ಥರಾಗಿರುವುದು ತೀವ್ರ ಕಳವಳಕಾರಿ ವಿಷಯ ಎಂದು ಎಸ್‌ಐಓ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಒಂದು ನಿರ್ದಿಷ್ಟ ಧರ್ಮದ ಮೇಲಿನ ದ್ವೇಷವು ಮುಗ್ಧ ಮಕ್ಕಳ ಪ್ರಾಣ ತೆಗೆಯುವ ಹೀನ ಮಟ್ಟಕ್ಕೆ ತಲುಪಿರುವುದು ಸಮಾಜದ ಸ್ವಾಸ್ಥ್ಯಕ್ಕೆ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ನಮ್ಮ ಸಮಾಜದಲ್ಲಿ ದ್ವೇಷ ಮತ್ತು ಅಸಹಿಷ್ಣುತೆ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ಎಸ್‌ಐಓ ಕಳವಳ ವ್ಯಕ್ತಪಡಿಸಿದೆ.

ಈಗಾಗಲೇ ಪೊಲೀಸರು ಈ ಹೀನಾಯ ಕೃತ್ಯವೆಸಗಿದ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಮಾದರಿಯಾಗುವಂತಹ ಶಿಕ್ಷೆ ವಿಧಿಸಬೇಕು. ಅಸ್ವಸ್ಥಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಿ, ಅವರ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಎಸ್ ಐ ಓ ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ರಾಜ್ಯ‌ ಕಾರ್ಯದರ್ಶಿ ಮೊಹಮ್ಮದ್ ಹಯ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...