ಅಲ್ಪಸಂಖ್ಯಾತ ಇಲಾಖೆಯಿಂದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ: ಎಸ್ಐಓದಿಂದ ಸಚಿವರಿಗೆ ಮನವಿ

Date:

Advertisements

ಕಳೆದ ಎರಡು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಕೂಡ ಈ ಬಗ್ಗೆ ವರದಿಗಳು ಬಂದಿವೆ‌. ಹಾಗಾಗಿ, ಈ ವರ್ಷದಿಂದ ಈ ಸೌಲಭ್ಯಗಳನ್ನು ಮತ್ತೆ ನೀಡಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ಒತ್ತಾಯಿಸಿದೆ‌.

ಈ ಬಗ್ಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ಕಚೇರಿಯಲ್ಲಿ ಸೋಮವಾರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಝಮೀರ್ ಅಹ್ಮದ್ ಅವರನ್ನು ಭೇಟಿಯಾದ ರಾಜ್ಯ ಕಾರ್ಯದರ್ಶಿ ಹಯಾನ್ ಅವರ ನೇತೃತ್ವದ ನಿಯೋಗವು, ಮನವಿ ಸಲ್ಲಿಸಿ ಒತ್ತಾಯಿಸಿದೆ.

ಕಳೆದ ಎರಡು ವರ್ಷಗಳಿಂದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಹಣಕಾಸಿನ ನೆರವು ದೊರೆತಿರಲಿಲ್ಲ. ಕೇಂದ್ರ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ತಾಣವನ್ನು ಸ್ಥಗಿತಗೊಳಿಸಿರುವುದು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ಸಹ ನಿಲ್ಲಿಸಿರುವುದು ಇದಕ್ಕೆ ಮುಖ್ಯ ಕಾರಣವಾಗಿತ್ತು. ಈ ಕಾರಣದಿಂದಾಗಿ ಸಾವಿರಾರು ಬಡ ಕುಟುಂಬಗಳ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಕಷ್ಟಪಡುವಂತಾಗಿದೆ ಎಂದು ಎಸ್ ಐ ಓ‌ ಮನವಿಯಲ್ಲಿ ತಿಳಿಸಿದೆ.

Advertisements

ರಾಜ್ಯ ಸರ್ಕಾರವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿರುವುದು ಸ್ವಾಗತಾರ್ಹ. ಆದರೆ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಇಲ್ಲದಿರುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಇಂದಿನ ದಿನಗಳಲ್ಲಿ ಶಿಕ್ಷಣದ ಖರ್ಚು ಹೆಚ್ಚಾಗುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಇಂತಹ ವಿದ್ಯಾರ್ಥಿವೇತನಗಳು ಬಹಳ ಮುಖ್ಯವಾಗಿವೆ ಎಂದು ಎಸ್ಐಒ ಕರ್ನಾಟಕವು ಮನಗಂಡಿದೆ‌. 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೂ ರಾಜ್ಯ ವಿದ್ಯಾರ್ಥಿವೇತನದ ಸೌಲಭ್ಯ ಸಿಗುವಂತೆ ಮಾಡಬೇಕೆಂದು ನಾವು ಕರ್ನಾಟಕ ಸರ್ಕಾರವನ್ನು ವಿನಂತಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದೆ.

ಈ ಮನವಿಗೆ ಸ್ಪಂದಿಸಿರುವ ಸಚಿವರಾದ ಝಮೀರ್ ಅಹ್ಮದ್, ಈ ಸಮಸ್ಯೆ ಇಲಾಖೆಯ ಗಮನಕ್ಕೆ ಬಂದಿದೆ. ಈ ವರ್ಷದಿಂದಲೇ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ನೀಡಲು ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಸ್ಐ‌ಓ ಮುಖಂಡರಾದ ಸೈಯ್ಯದ್ ಇಸ್ಮಾಯಿಲ್ ಕ್ವಾದ್ರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X