ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

Date:

ಮಂಗಳೂರು: “ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ ಗೊಂದಲದ ಬಗ್ಗೆ ಯಾವುದೇ ವಾಸ್ತವಾಂಶಗಳನ್ನು ಪರಿಶೀಲಿಸದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿಕೆ ನೀಡಿದ್ದಾರೆ. ಜನಪ್ರತಿನಿಧಿಗಳಾದವರು ಸತ್ಯಾಸತ್ಯತೆ ಪರಿಶೀಲಿಸದೇ ಹೇಳಿಕೆ ನೀಡಬಾರದು” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಟೀಕಿಸಿದ್ದಾರೆ.

- Advertisement -

“ಬಿಜೆಪಿಯ ಸಮಾವೇಶವೊಂದರಲ್ಲಿ ತೇಜಸ್ವಿ ಸೂರ್ಯ ಅವರು ಎಸ್‌ಐಆರ್ ಪ್ರಕ್ರಿಯೆ ಹಾಗೂ ಅದಕ್ಕೆ ಕಾಂಗ್ರೆಸ್ ವ್ಯಕ್ತಪಡಿಸುತ್ತಿರುವ ವಿರೋಧದ ಕುರಿತು ಮಾತನಾಡುವ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಗಳ ಹೆಸರಿನ ವಿಚಾರವನ್ನು ಪ್ರಸ್ತಾಪಿಸಿದಾಗ ಸಭೆಯಲ್ಲಿ ಹಾಜರಿದ್ದವರು ನೈಜ ಸಂಗತಿಗಳನ್ನು ತಿಳಿಯದೆ ಚಪ್ಪಾಳೆ ತಟ್ಟಿದ್ದಾರೆ” ಎಂದು ಗಟ್ಟಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಈ ಪ್ರಕರಣದ ವಾಸ್ತವಾಂಶಗಳನ್ನು ವಿವರಿಸಿದ ಗಟ್ಟಿ, ಮೊಹಮ್ಮದ್ ನಜೀರ್ ಅವರ ಕುಟುಂಬದ ಐವರು ಸದಸ್ಯರು ಮನೆ ಸಂಖ್ಯೆ 1-288Cರಲ್ಲಿ ವಾಸವಾಗಿದ್ದಾರೆ. ಅವರ ಹೆಸರುಗಳು ಮತದಾರರ ಪಟ್ಟಿಯ ಭಾಗ ಸಂಖ್ಯೆ 186ರಲ್ಲಿ ದಾಖಲಾಗಿವೆ. ಈ ಕುಟುಂಬವು ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿ ವಾಸವಾಗಿದ್ದು, 2002ರಲ್ಲಿಯೂ ಮತದಾನ ಮಾಡಿದೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ, ಸತ್ಯಮೂರ್ತಿ ಕೆ. ಮತ್ತು ಅವರ ಕುಟುಂಬದ ಮೂವರು ಸದಸ್ಯರು ಮನೆ ಸಂಖ್ಯೆ 1-288ರಲ್ಲಿ ವಾಸವಾಗಿದ್ದಾರೆ. ಅವರ ಹೆಸರುಗಳೂ ಸಹ ಮತದಾರರ ಪಟ್ಟಿಯ ಭಾಗ ಸಂಖ್ಯೆ 186ರಲ್ಲಿ ದಾಖಲಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಮನೆ ಸಂಖ್ಯೆ 1-288 ಮತ್ತು 1-288C ಎರಡು ಪ್ರತ್ಯೇಕ ಮನೆಗಳಾಗಿವೆ. 1-288 ಎಂಬುದು ಗ್ರಾಮ ಪಂಚಾಯತ್‌ನ ಮನೆ ಸಂಖ್ಯೆ (ಡೋರ್ ನಂಬರ್) ಆಗಿದ್ದರೆ, 1-288C ಮತ್ತೊಂದು ಪ್ರತ್ಯೇಕ ಮನೆ ಸಂಖ್ಯೆಯಾಗಿದೆ. ಎರಡೂ ಮನೆಗಳು ವಿಭಿನ್ನ ಕುಟುಂಬಗಳಿಗೆ ಸೇರಿವೆ. ಈ ಮೂಲಭೂತ ವಿಚಾರವನ್ನು ಅರಿಯದೆ ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ ಕುರಿತು ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಗಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು ಯಾವುದೇ ವಿಚಾರದ ಕುರಿತು ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವಾಸ್ತವಾಂಶಗಳನ್ನು ಪರಿಶೀಲಿಸಬೇಕು ಎಂದು ಗಟ್ಟಿ ಮನವಿ ಮಾಡಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಎಸ್‌ಐಆರ್ ಪರಿಶೀಲನೆ

“ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ದೇಶಾದಾದ್ಯಂತ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ವ್ಯಾಪಕವಾಗಿ ತಳಮಟ್ಟದ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಗುರುತಿಸುವುದು ಹಾಗೂ ಮತದಾರರ ಪಟ್ಟಿಯ ಪರಿಶೀಲನೆಗೆ ಒತ್ತು ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ” ಎಂದು ಗಟ್ಟಿ ತಿಳಿಸಿದ್ದಾರೆ.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...