ಶಿರಾ | ಶಾಲೆಗಳಿಗೆ ಹೆಚ್ಚುವರಿ ಶೌಚಾಲಯ ನಿರ್ಮಿಸಿಕೊಡಿ : ಗ್ರಾಮ ಸಭೆಯಲ್ಲಿ ಮಕ್ಕಳ ಮನವಿ

Date:

Advertisements

ನಮ್ಮ ಶಾಲೆಯಲ್ಲಿ ಬಾಲಕಿಯರ ಶೌಚಾಲಯವು ಅಪೂರ್ಣಗೊಂಡಿದೆ. ನಮ್ಮದು ಪ್ರೌಢಶಾಲೆಯಾಗಿರುವುದರಿಂದ ಶಾಲೆಗೆ ಬರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ಕೊರತೆಯಿದೆ. ಹಾಗಾಗಿ ಮಕ್ಕಳಿಗನುಗುಣವಾಗಿ ಶೌಚಾಲಯಗಳ ಅಗತ್ಯವಿದೆ. ಆದ್ದರಿಂದ ಶಾಲೆಯಲ್ಲಿ ಹೆಚ್ಚುವರಿ ಶೌಚಾಲಯಗಳನ್ನು ನಿರ್ಮಿಸಿಕೊಡಬೇಕೆಂದು ಸಿರಾ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮ ಪಂಚಾಯತಿಯು ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ ಯಲ್ಲಿ ಬ್ರಹ್ಮಸಂದ್ರ ಪ್ರೌಢಶಾಲೆಯ ಮಕ್ಕಳು ಅಧಿಕಾರಿಗಳನ್ನು ಮತ್ತು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

       ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ, ಸಿಎಂಸಿಎ ಸಂಸ್ಥೆ ಹಾಗೂ ಚಿಗುರು ಯುವಜನ ಸಂಘ ಇವರ ಸಹಯೋಗದಲ್ಲಿ ನೆಲದಿಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ ಯನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಜಯಲಕ್ಷ್ಮಮ್ಮ ಮತ್ತು ವೇದಿಕೆಯಲ್ಲಿದ್ದ ಗಣ್ಯರು‌ ಮತ್ತು ಮಕ್ಕಳು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

1000662826

 ಈ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಯ ಮಕ್ಕಳು ತಮ್ಮ ತಮ್ಮ ಶಾಲೆಯ ಮತ್ತು ಗ್ರಾಮದ ಸಮಸ್ಯೆ-ಸವಾಲುಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು‌. 

Advertisements

       ಕಾಳೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ವಿಧ್ಯಾರ್ಥಿಗಳು ತಮ್ಮ ಶಾಲೆಯ ಸಮಸ್ಯೆಗಳನ್ನು ಚರ್ಚಿಸುತ್ತಾ, ನಮ್ಮ ಶಾಲೆಯ ಸುತ್ತಮುತ್ತ ಕಾಂಪೌಂಡ್ ಇಲ್ಲದಿರುವುದರಿಂದ‌ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಉಂಟಾಗಬಹುದು. ಆಗಾಗಿ ಶಾಲೆಯ ಸುತ್ತ ಕಾಂಪೌಂಡ್ ವ್ಯವಸ್ಥೆಯನ್ನು ನಿರ್ಮಿಸಿಕೊಡಬೇಕೆಂದು ಹಾಗೂ 

ಶಾಲಾ ಆವರಣದಲ್ಲಿರುವ ಟ್ಯಾಂಕ್‌ ಗೆ ಮುಚ್ಚಳವನ್ನು ಹಾಕಿಕೊಡಬೇಕೆಂದು ಅಧಿಕಾರಿಗಳಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಂಡರು. 

       ಸಭೆಯಲ್ಲಿ ಮಕ್ಕಳು ತಮ್ಮ ಶಾಲೆಗಳಿಗೆ ಶೌಚಾಲಯ ಸರಿಪಡಿಸುವಂತೆ, ಶುದ್ದ ಕುಡಿಯುವ ನೀರಿನ ಘಟಕಗಳನ್ನು ಕೊಡಿಸಿಕೊಡುವಂತೆ, ಶಾಲಾ ಆವರಣಗಳನ್ನು ಸ್ವಚ್ಚಗೊಳಿಸುವಂತೆ, ಶಾಲೆಗಳಿಗೆ ಕಂಪ್ಯೂಟರ್ ಒದಗಿಸುವಂತೆ, ಶಾಲಾ ಕೊಠಡಿಗಳನ್ನು ದುರಸ್ಥಿಗೊಳಿಸುವಂತೆ, ಆಟದ ಮೈದಾನವನ್ನು ಮತ್ತು ಕಾಂಪೌಂಡ್ ಒದಗಿಸುವಂತೆ, ಶಾಲೆಗೆ ಪೀಠೋಪಕರಣಗಳನ್ನು ನೀಡುವಂತೆ ಹಾಗೂ ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಒಟ್ಟು 7 ಶಾಲೆಗಳ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ, ಒಟ್ಟು 46 ಸಮಸ್ಯೆಗಳನ್ನು ಹೇಳಿಕೊಂಡರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆಗಳನ್ನು ಬಹುಬೇಗ ಬಗೆಹರಿಸುವುದಾಗಿ ಭರವಸೆ ನೀಡಿದರು.

1000662813

        ಸಭೆಯಲ್ಲಿ ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ದೇಶದಲ್ಲಿ ಮಕ್ಕಳ ಸಂಖ್ಯೆ ಒಟ್ಟು ಜನಸಂಖ್ಯೆಯಲ್ಲಿ ಶೇ.34 ರಷ್ಟಿದ್ದಾರೆ. ಭಾರತ ದೇಶವು ವಿಶ್ವಸಂಸ್ಥೆಯೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆಗೆ ನಾವು ಬದ್ದರಾಗಿದ್ದೇವೆಂದು ಸಹಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಅನೇಕ ಕಾರ್ಯಚಟುವಟಿಕೆಗಳನ್ನು ಮಾಡುತ್ತಾ ಬರುತ್ತಿದೆ. ರಾಜ್ಯದಲ್ಲಿ ಪ್ರಸ್ತುತವಾಗಿ ಪ್ರತಿವರ್ಷ ಹುಟ್ಟುವ 1000 ಮಕ್ಕಳಲ್ಲಿ 25 ಮಕ್ಕಳು ಒಂದು ವರ್ಷ ಪೂರೈಸುವುದರೊಳಗೆ ಸಾವನ್ನಪ್ಪುತ್ತಿದ್ದಾರೆ. ಸೊನ್ನೆಯಿಂದ 5 ವರ್ಷದೊಳಗಿನ ಮಕ್ಕಳಲ್ಲಿ ಶೇಕಡಾ 65 ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಶೇಕಡ 21ರಷ್ಟು ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವುದರೊಳಗೆ ಮದುವೆಯಾಗುತ್ತಿದೆ. ಅವರೆಲ್ಲರೂ ಅವಕಾಶ ವಂಚಿತರಾಗುತ್ತಿದ್ದಾರೆ. ಇನ್ನೂ ಕೆಲವೆಡೆ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಇಂತಹ ಸಮಸ್ಯೆಗಳನ್ನು ಚರ್ಚಿಸಲು ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊಟ್ಟಮೊದಲು 2006 ರಲ್ಲಿ ಮಕ್ಕಳ ಗ್ರಾಮಸಭೆಯನ್ನು ಮಾಡುವುದಾಗಿ ಸುತ್ತೋಲೆಯನ್ನು ಹೊರಡಿಸಿತ್ತು. ಆಗಾಗಿ ಇಲಾಖೆಯು ಪ್ರತಿವರ್ಷವೂ ನವೆಂಬರ್ ತಿಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ಯನ್ನು ಕಡ್ಡಾಯವಾಗಿ ಆಯೋಜಿಸುವ ಸಲುವಾಗಿ ಸುತ್ತೋಲೆಯನ್ನು ಹೊರಡಿಸುತ್ತಿದೆ. ಇದರಿಂದ ಮಕ್ಕಳೂ ಸಹ ಸ್ಥಳೀಯ ಸರ್ಕಾರ, ಸ್ಥಳೀಯ ಸಂಸ್ಥೆಗಳೊಂದಿಗೆ ಭಾಗವಹಿಸಲು ಅವಕಾಶ ಒದಗಿತು. ಆದ್ದರಿಂದ ಮಕ್ಕಳೂ ಸಹ ತಮ್ಮ ಹಳ್ಳಿಯ ಮತ್ತು ಶಾಲೆಯ ಸಮಸ್ಯೆಗಳನ್ನು ಚರ್ಚಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಿ, ಆಡಳಿತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅಭಿಪ್ರಾಯಪಟ್ಟರು.

1000662807

           ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಬ್ಬರಾಜು ಅರಸ್  ಮಾತನಾಡಿ, ಸ್ಥಳೀಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ವಿವರಿಸಿದರು. ಸಾರ್ವಜನಿಕ ತೆರಿಗೆಯ ಬಗ್ಗೆ ಸರ್ಕಾರಗಳಿಂದ ಬರುವ ಅನುದಾನಗಳನ್ನು ಬಳಸಿಕೊಂಡು ಗ್ರಾಮ ಪಂಚಾಯತ್ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕ ಗ್ರಂಥಾಲಯವನ್ನು ಹೆಚ್ಚಿನ ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕೆಂದರು. ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಚರ್ಚಿಸಿದ ಸಮಸ್ಯೆ, ಸವಾಲುಗಳನ್ನು ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಆದಷ್ಟು ಬೇಗ ಕಾರ್ಯಗತವಾಗುವಂತೆ ಮಾಡುತ್ತೇವೆಂದು ತಿಳಿಸಿದರು.

      ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಜಯಲಕ್ಷ್ಮಮ್ಮಜಯಸಿಂಹ  ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಗ್ರಾಮ ಪಂಚಾಯತಿಯು ಬದ್ದವಾಗಿದ್ದು, ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತೇವೆ. ಈ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ತಮ್ಮ ಕುಂದುಕೊರತೆಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದರಿಂದ ಪಂಚಾಯತಿಯಲ್ಲಿ ಕ್ರಿಯಾ ಯೋಜನೆ ಮಾಡಲು ಸಹಾಯಕವಾಯಿತು ಎಂದು ತಿಳಿಸಿದರು. 

1000662816

       ಸಭೆಯಲ್ಲಿ ಸಿಎಂಸಿಎ  ಸಂಸ್ಥೆಯ ಸ್ವಯಂಸೇವಕರಾದ ಮಂಜುನಾಥ್ ಆಲದಮರ  ನಿರೂಪಿಸಿದರು. ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಶ್ರೀಮತಿ ಯಶೋಧ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಬ್ಬರಾಜ್ ಅರಸ್  ಹಿಂದಿನ ವರ್ಷದ ಮಕ್ಕಳ ಗ್ರಾಮ ಸಭೆಯ ಅನುಪಾಲನಾ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ದೇವರಾಜು , ಸದಸ್ಯರಾದ‌ ರತ್ನಮ್ಮ, ರಾಜಣ್ಣ, ಪುನೀತ, ಅನುಸೂಯಮ್ಮ, ಮಂಗಳಮ್ಮ, ರಂಗಶಾಮಯ್ಯ, ಕೃಷ್ಣಮೂರ್ತಿ, ಚೆನ್ನಯ್ಯ,ನಾಗರತ್ನಮ್ಮ, ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಯಾದ ಪದ್ಮಜಾ , ಸಿಎಂಸಿಎ  ಸಂಸ್ಥೆಯ ಸ್ವರೂಪ್, ಸ್ವಯಂಸೇವಕರಾದ‌ ಅಂಬಿಕಾ, ದರ್ಶನ್, ಪಂಚಾಯಿತಿಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ಮಕ್ಕಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X