ಶಿರಾ | ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ಅನುಪಯುಕ್ತ ವಸ್ತುಗಳನ್ನು ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಕೂಡಲೇ ರೋಗಿಗೆ ಬಳಸಿದ ಇಂಜೆಕ್ಷನ್ ಸಿರಿಂಜ್, ಔಷಧಿ ಬಾಟಲಿ, ಮತ್ತಿತರ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಶುಶ್ರೂಷಕಿಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

 ಶಿರಾ ಸಾರ್ವಜನಿಕ ಆಸ್ಪತ್ರೆಯ ಡೇಕೇರ್ ವಿಭಾಗಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದ ಅವರು, ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ಹಾಸಿಗೆ/ಹೊದಿಕೆ ಬದಲಾಯಿಸದೆ ರೋಗಿಗೆ ಬಳಸಿದ ಔಷಧದ ಬಾಟಲಿ, ಸಿರಿಂಜ್‌ಗಳನ್ನು ತೆರವುಗೊಳಿಸದೆ ಹಾಗೆ ಇದ್ದುದನ್ನು ಕಂಡ ಅವರು ಶುಶ್ರೂಷಕಿಯನ್ನು ತರಾಟೆಗೆ ತೆಗೆದುಕೊಂಡರು. ಕರ್ತವ್ಯ ನಿರ್ಲಕ್ಷö್ಯ ತೋರಿದ ಶುಶ್ರೂಷಕಿಗೆ ಕೂಡಲೇ ಎಚ್ಚರಿಕೆ ನೋಟೀಸ್ ನೀಡಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಿದ್ದೇಶ್ವರ ಅವರಿಗೆ ಸೂಚನೆ ನೀಡಿದರು. 

1000744510

 ಇಂಜೆಕ್ಷನ್ ಸಿರಿಂಜ್‌ಗಳನ್ನು ಮರು ಬಳಕೆ ಮಾಡುವುದರಿಂದ ಅಮಾಯಕರಿಗೆ ಏಡ್ಸ್ನಂತಹ ಮಾರಕ ರೋಗ, ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಬಳಕೆಯಾದ ಔಷಧಿ ಸಾಮಗ್ರಿ ಹಾಗೂ ಅನುಪಯುಕ್ತ ವಸ್ತುಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಸೂಚನೆ ನೀಡಿದರು. 

Advertisements

 ನಂತರ ರಕ್ತಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ರಕ್ತ ಶುದ್ಧಿಕರಣ ಘಟಕಕ್ಕೆ ಪ್ರತಿ ದಿನ ಇತರೆ ಜಿಲ್ಲೆಯ ರೋಗಿಗಳು ಬರುವುದರಿಂದ ರೋಗಿಗಳಿಗೆ ಅನುಕೂಲವಾಗುವಂತಹ ವಾತಾವರಣ ನಿರ್ಮಿಸಬೇಕು. ಘಟಕಕ್ಕೆ ಹವಾ ನಿಯಂತ್ರಕಗಳನ್ನು ಸರಬರಾಜು ಮಾಡಿದ್ದರೂ ಸಹ ಇದುವರೆಗೂ ಅಳವಡಿಸಿಲ್ಲ. ಈ ದಿನವೇ ಅಳವಡಿಸಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು. ಉದಾಸೀನ ತೋರಿದರೆ ಮುಂದಿನ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

1000744513

 ವಾರಕ್ಕೊಮ್ಮೆಯಾದರೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸ್ಥಳದಲ್ಲಿದ್ದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರಿಗೆ ನಿರ್ದೇಶನ ನೀಡಿದ ಅವರು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾವು ಕಡಿತದಿಂದ ದಾಖಲಾಗಿದ್ದ ಶಿರಾ ತಾಲ್ಲೂಕು ಹೊಸಪಾಳ್ಯದ 23 ವರ್ಷದ ಧನಂಜಯ ಅವರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಬೇಗ ಗುಣಮುಖರಾಗಬೇಕೆಂದು ಹಾರೈಸಿದರು. ನಂತರ ಡ್ರೆಸ್ಸಿಂಗ್ ಕೊಠಡಿ, ಹೊರ ರೋಗಿಗಳ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. 

 ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದನ್ವಯ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ, ವಿವಿಧ ಇಲಾಖೆಗಳಡಿ ನಡೆಯುವ ಸರ್ಕಾರದ ವಿದ್ಯಾರ್ಥಿನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ನ್ಯೂನ್ಯತೆಗಳು ಕಂಡು ಬಂದಲ್ಲಿ ಅಧಿಕಾರಿಗಳ ಹಂತದಲ್ಲಿ ಸರಿಪಡಿಸುವ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು.   

ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಅನುಪಯುಕ್ತ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಶಿರಾ ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಇತರೆ ಜಿಲ್ಲೆಗಳಿಂದಲೂ ರೋಗಿಗಳು ಬಂದು ಪ್ರಯೋಜನ ಪಡೆಯುತ್ತಿದ್ದು, ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಘಟಕಕ್ಕೆ ಕೂಡಲೇ ಹವಾನಿಯಂತ್ರಕವನ್ನು ಅಳವಡಿಸಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚನೆ ನೀಡಿದ್ದೇನೆ ಎಂದು ಹೇಳಿದರು.  

1000744475

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಮೇಲ್ವಿಚಾರಕರು ಕಡ್ಡಾಯವಾಗಿ ವಿದ್ಯಾರ್ಥಿ ನಿಲಯಗಳಲ್ಲಿಯೇ ವಾಸವಿರಬೇಕೆಂದು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 

ಇದಕ್ಕೂ ಮುನ್ನ ಶಿರಾ ಪಟ್ಟಣದ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಡಾ: ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

1000744485

ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಉತ್ತಮ ನಿರ್ವಹಣೆ ಕಂಡು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು. 

ನಗರದ ಅಂಬೇಡ್ಕರ್ ವಿದ್ಯಾರ್ಥಿ ನಿಲಯದಲ್ಲಿ ಕೆಟ್ಟು ನಿಂತಿರುವ ಫ್ಯಾನ್‌ಗಳನ್ನು ಶೀಘ್ರ ದುರಸ್ತಿಪಡಿಸಬೇಕು. ಸಿ.ಸಿ.ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ. ವಿದ್ಯಾರ್ಥಿ ನಿಲಯದಲ್ಲಿ ಯಾವುದಾದರೂ ಅನಾಹುತಗಳು ಸಂಭವಿಸಿದರೆ ಯಾರು ಜವಾಬ್ದಾರಿ? ತಕ್ಷಣವೇ ಸಿಸಿ ಕ್ಯಾಮೆರಾಗಳನ್ನು ಸರಿಪಡಿಸಬೇಕು ಎಂದು ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ಅವರಿಗೆ ಖಡಕ್ ಸೂಚನೆ ನೀಡಿದರಲ್ಲದೆ, ತಾಲ್ಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಒಟ್ಟು 12 ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗಳಿದ್ದರೆ ತಮಗೆ ವರದಿ ನೀಡಬೇಕೆಂದು ನಿರ್ದೇಶಿಸಿದರು.  

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X