ಶಿರಾ | ಎರಡನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಕಾಲ್ನಡಿಗೆ ಜಾಥಾ

Date:

Advertisements

ಒಳ ಮೀಸಲಾತಿಯನ್ನು ಎಥವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಶಿರಾ ನಗರದ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯಿಂದ ಹೊರಟ ಕಾಲ್ನಡಿಗೆ ಜಾಥಾದ ತಂಡ ದೊಡ್ಡಆಲದ ಮರದ ಬಳಿ ವಾಸ್ತವ್ಯ ಹೂಡಿ ಸೋಮವಾರ ಎರಡನೇ ದಿನದ ಕಾಲ್ನಡಿಗೆ ಜಾಥಾ ಪ್ರಾರಂಭವಾಯಿತು.

ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಮಾದಿಗ ಮಾಸದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಆರ್ ರಂಗನಾಥ್, ಒಳ ಮೀಸಲಾತಿಯ ಬಗ್ಗೆ ಶಿರಾ ಕ್ಷೇತ್ರದ ಶಾಸಕರಾದ ಟಿಬಿ ಜಯಚಂದ್ರ ಅವರಾಗಲಿ ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳರವರಾಗಲಿ ಈವರೆಗೂ ಕಾಲ್ನಡಿಗೆ ಜಾಥಾದ ತಂಡವನ್ನು ಸಂಪರ್ಕಿಸುವುದಾಗಲಿ ಅಥವಾ ನಿಮ್ಮ ಪರ ಇದ್ದೇವೆ ಎಂದು ಹೇಳುವುದಾಗಲಿ ಮಾಡಿಲ್ಲ ಎಂದರು.

ಶಿರಾ ವಿಧಾನಸಭಾ ಕ್ಷೇತ್ರದ ಮತದಾರರ ಪೈಕಿ ಮಾದಿಗ ಸಮುದಾಯದ ಮತಗಳ ನಿರ್ಣಾಯಕ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ನಾಯಕರುಗಳು ಒಳ ಮೀಸಲಾತಿ ಹೋರಾಟಗಾರರಿಗೆ ಈವರೆಗೂ ಬೆಂಬಲ ಸೂಚಿಸಿಲ್ಲ. ಇವರೆಲ್ಲರೂ ಮಾದಿಗ ಸಮುದಾಯದ ಹೋರಾಟಗಾರರ ಕೆಂಗಣ್ಣಿಗೆ ಮೂರು ಪಕ್ಷಗಳು ಗುರಿಯಾಗುತ್ತಾರೆ. ಮುಂದೆ ಬರುವ ಉಪಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ರಾಜ್ಯ ವ್ಯಾಪ್ತಿ ಮೂರು ಪಕ್ಷಗಳ ವಿರುದ್ಧ ತಿರುಗಿ ಬೀಳುವುದು ನಿಶ್ಚಿತ ಎಂದು ಎಚ್ಚರಿಸಿದರು.

Advertisements

ಈ ಸಂದರ್ಭದಲ್ಲಿ ದಲಿತಪರ ಹೋರಾಟಗಾರ ಜಿ ಎಸ್ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಕೆ ಮಂಜುನಾಥ್, ಎನ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X