ಶಿರಸಿ | ಕೇವಲ 11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ‘ಆಕರ್ಷ’ ಸಾಧನೆ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರತಿಭಾವಂತ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಅವರು ಕೇವಲ 11 ನಿಮಿಷಗಳಲ್ಲಿ 155 ವಿವಿಧ ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026’ ನಲ್ಲಿ ತಮ್ಮ ಹೆಸರನ್ನು ದಾಖಲಿಸುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

- Advertisement -

ನಗರದ ಕೆ.ಎಚ್.ಬಿ. ಕಾಲೋನಿಯ ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯಾಗಿರುವ ಆಕರ್ಷ, ಅತ್ಯಂತ ವೇಗ ಹಾಗೂ ನಿಖರತೆಯಿಂದ ಒಂದರ ಹಿಂದೆ ಒಂದರಂತೆ 155 ಯೋಗಾಸನಗಳನ್ನು ಪೂರ್ಣಗೊಳಿಸಿ ಈ ಅಪರೂಪದ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಶಿರಸಿಯ ‘ಸ್ನೇಕ್ ಸ್ಟಾರ್’ ಎಂದೇ ಖ್ಯಾತರಾಗಿರುವ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಹುಲೇಕಲ್ ದಂಪತಿಯ ಪುತ್ರಿಯಾಗಿರುವ ಆಕರ್ಷ, ಬಾಲ್ಯದಿಂದಲೇ ಯೋಗದ ಬಗ್ಗೆ ವಿಶೇಷ ಆಸಕ್ತಿ ಬೆಳೆಸಿಕೊಂಡಿದ್ದರು. ಪ್ರತಿದಿನದ ಶಿಸ್ತುಬದ್ಧ ಅಭ್ಯಾಸ, ಪೋಷಕರ ನಿರಂತರ ಪ್ರೋತ್ಸಾಹ ಹಾಗೂ ಗುರುಗಳ ಮಾರ್ಗದರ್ಶನದ ಫಲವಾಗಿ ರಾಷ್ಟ್ರೀಯ ಮಟ್ಟದ ಈ ದಾಖಲೆಯನ್ನು ನಿರ್ಮಿಸಲು ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಭಾರೀ ಮಳೆ ಹಿನ್ನೆಲೆ: ಮೂರು ತಾಲ್ಲೂಕುಗಳಲ್ಲಿ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಯೋಗದಂತಹ ಪ್ರಾಚೀನ ಭಾರತೀಯ ಪರಂಪರೆಯ ಕಲೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಪ್ರದರ್ಶಿಸಿರುವ ಆಕರ್ಷ ಅವರ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ಅಧಿಕೃತ ಮಾನ್ಯತೆ ನೀಡಿ ಪ್ರಮಾಣಪತ್ರ ಹಾಗೂ ಪದಕವನ್ನು ಪ್ರದಾನ ಮಾಡಿದೆ. ಈ ಸಾಧನೆಯಿಂದ ಪಿ.ಎಂ. ಶ್ರೀ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೆ.ಎಚ್.ಬಿ. ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೌರವ ದೊರೆತಿದೆ.

ಶಾಲೆಯ ಶಿಕ್ಷಕರು, ಸಹಪಾಠಿಗಳು, ಪೋಷಕರು ಹಾಗೂ ಸ್ಥಳೀಯರು ಆಕರ್ಷ ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಆಕರ್ಷ ಅವರ ಈ ಅಪೂರ್ವ ಸಾಧನೆಗೆ ಸಾರ್ವಜನಿಕರು, ಯೋಗಾಸಕ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲೂ ಸ್ಥಾನ ಪಡೆದು ದೇಶದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...