ಶಿರಸಿ | ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Date:

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ನೀಡಿದ ಸಲಹೆಯಿಂದ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಗಣೇಶನಗರದಲ್ಲಿ ಸಂಭವಿಸಿದೆ.

- Advertisement -

ಘಟನೆಯ ವಿವರ: ನಗರದ ಪ್ರತಿಷ್ಠಿತ ಮಾರಿಕಾಂಬಾ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಶುಭಂ ನಾಗೇಶ ನಾಯ್ಕ್ ಮೃತಪಟ್ಟ ದುರ್ದೈವಿ. ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಬಾಲಕ ಓದಿನತ್ತ ಗಮನಹರಿಸದೆ, ಮೊಬೈಲ್ ಮತ್ತು ಟಿವಿ ವೀಕ್ಷಣೆಯಲ್ಲಿ ಅತಿಯಾಗಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಗುರುವಾರ ಶುಭಂ ಓದುವುದನ್ನು ಬಿಟ್ಟು ಮೊಬೈಲ್ ಬಳಸುತ್ತಿರುವುದನ್ನು ಗಮನಿಸಿದ ತಾಯಿ, ಮಗನ ಹಿತದೃಷ್ಟಿಯಿಂದ ಬುದ್ಧಿವಾದ ಹೇಳಿದ್ದರು. “ಪರೀಕ್ಷೆಗಳು ಹತ್ತಿರ ಬರುತ್ತಿವೆ, ಮೊಬೈಲ್ ಬದಿಗಿಟ್ಟು ಓದಿನತ್ತ ಗಮನಹರಿಸು” ಎಂದು ತಿಳಿಹೇಳಿದ್ದರು.

ಈ ವೇಳೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದ್ದು, ತಾಯಿ ಮಗನಿಗೆ ಗದರಿಸಿ ಎರಡು ಏಟು ಹೊಡೆದಿದ್ದರು ಎನ್ನಲಾಗಿದೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣವೇ ಆತನನ್ನು ನಗರದ ಟಿ.ಎಸ್.ಎಸ್. (TSS) ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಮಗನ ಅಕಾಲಿಕ ಮರಣದಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಇಡೀ ಪ್ರದೇಶದಲ್ಲಿ ಶೋಕದ ಛಾಯೆ ಆವರಿಸಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಎಸ್.ಎಸ್.ಎಲ್.ಸಿ ಪರೀಕ್ಷೆ: ಶೇ. 100ರಷ್ಟು ಹಾಜರಾತಿ ಮತ್ತು ಫಲಿತಾಂಶಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ

ಈ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಒಂದು ವಿನಂತಿ:‌ ಪರೀಕ್ಷೆಯ ಸಮಯ ಎನ್ನುವುದು ಕೇವಲ ಅಂಕಗಳಿಕೆಯ ಹಂತವಲ್ಲ, ಅದು ನಿಮ್ಮ ತಾಳ್ಮೆ ಮತ್ತು ಶಿಸ್ತಿನ ಪರೀಕ್ಷೆಯೂ ಹೌದು. ಪೋಷಕರು ಹೇಳುವ ಮಾತುಗಳು ನಿಮ್ಮ ಭವಿಷ್ಯದ ಏಳಿಗೆಗಾಗಿಯೇ ಹೊರತು ನಿಮ್ಮನ್ನು ನೋಯಿಸುವುದಕ್ಕಲ್ಲ. ಸಣ್ಣಪುಟ್ಟ ವಿಚಾರಗಳಿಗೆ ಬೇಸತ್ತು ಅಮೂಲ್ಯವಾದ ಜೀವನವನ್ನು ಅಂತ್ಯಗೊಳಿಸಿಕೊಳ್ಳುವುದು ಯಾವುದೇ ಸಮಸ್ಯೆಗೂ ಪರಿಹಾರವಲ್ಲ. ಸೋಲು-ಗೆಲುವು ಏನೇ ಇರಲಿ, ಧೈರ್ಯದಿಂದ ಎದುರಿಸಿ.

ಪೋಷಕರಲ್ಲಿ ವಿನಂತಿ: ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರದೆ, ಅವರ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಪ್ರೀತಿಯಿಂದ ಸಂವಹನ ನಡೆಸಿ. ಮಕ್ಕಳ ಮೊಬೈಲ್ ಚಟದ ಬಗ್ಗೆ ಮೃದುವಾಗಿ ಅವರಿಗೆ ಮನವರಿಕೆ ಮಾಡಿಕೊಡಿ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...