ಶಿರಸಿ | ಅಂಬೇಡ್ಕರ್ ವಸತಿ ಶಾಲೆಗೆ ಎಸಿ ಕಾವ್ಯರಾಣಿ ದಿಢೀರ್ ಭೇಟಿ: ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆ

Date:

ಶಿರಸಿ: ತಾಲೂಕಿನ ಹುಲೇಕಲ್‌ನ (ಗಾಂಧಿನಗರ) ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ ಅವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಿರಸಿ ಉಪ ವಿಭಾಗಾಧಿಕಾರಿಗಳಾದ ಕುಮಾರಿ ಕಾವ್ಯರಾಣಿ ಕೆ.ವಿ ಅವರು ಶುಕ್ರವಾರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ವಸತಿ ಶಾಲೆಯಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಬಂದಿದ್ದ ದೂರಿನ ಗಂಭೀರತೆಯನ್ನು ಅರಿತ ಎಸಿ ಅವರು, ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಿದರು. ಮಕ್ಕಳ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ಅದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಕಠಿಣವಾಗಿ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಧಿಕಾರಿಗಳ ದಂಡು: ಪರಿಶೀಲನೆಯ ಸಂದರ್ಭದಲ್ಲಿ ಎಸಿ ಅವರೊಂದಿಗೆ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರತಿ ಹಿರೆಮಠ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ನಗರಸಭೆ ಪೌರಾಯುಕ್ತ ಪ್ರಕಾಶ ಎಂ ಚನ್ನಪ್ಪನವರ ಅವರಿಗೆ ವಸತಿ ಶಾಲೆಯ ಪರಿಸರದ ಸ್ವಚ್ಛತೆ ಕಾಪಾಡುವ ಬಗ್ಗೆ ಸೂಚನೆ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-2) ಬಸವರಾಜ ಐ ಬಂಡೇರ್‌ ಅವರಿಗೆ ವಸತಿ ಶಾಲೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾವ್ಯರಾಣಿ ಅವರು ತಾಕೀತು ಮಾಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ: ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ವಸತಿ ಶಾಲೆಯ ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾಧ್ಯಮಗಳ ವರದಿಯ ಬೆನ್ನಲ್ಲೇ ಎಸಿ ಅವರು ತೋರಿದ ಈ ತ್ವರಿತ ಪ್ರತಿಕ್ರಿಯೆ ಮತ್ತು ಅಧಿಕಾರಿಗಳ ತಂಡದೊಂದಿಗೆ ನಡೆಸಿದ ಸಮೀಕ್ಷೆಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...