ಶಿರಸಿ | ಅಘನಾಶಿನಿ-ವೇದಾವತಿ ನದಿ ಜೋಡಣೆ: ಪಶ್ಚಿಮ ಘಟ್ಟ ರಕ್ಷಣೆಗೆ ಮಾರ್ಗಸೂಚಿ ಪಾಲಿಸಲು ಯುನೆಸ್ಕೋ ಸೂಚನೆ

Date:

ಶಿರಸಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ರಸ್ತಾವಿತ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಬೆಳವಣಿಗೆಯಾಗಿದೆ.

- Advertisement -

ವಿಶ್ವ ಪರಂಪರೆಯ ಸಮಾವೇಶದ ನಿಬಂಧನೆ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಯುನೆಸ್ಕೋ (UNESCO) ಭಾರತ ಸರ್ಕಾರಕ್ಕೆ ಲಿಖಿತ ಸೂಚನೆ ನೀಡಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಕೇಂದ್ರ ನೀರಾವರಿ ಅಭಿವೃದ್ಧಿ ಪ್ರಾಧಿಕಾರವು ಹಮ್ಮಿಕೊಂಡಿರುವ ಈ ಯೋಜನೆಯ ವಿರುದ್ಧ ಪರಿಸರ ಹೋರಾಟಗಾರರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಫೆಬ್ರವರಿ 17 ರಂದು ಯುನೆಸ್ಕೋದ ವಿಶ್ವ ಪರಂಪರೆ ಕೇಂದ್ರಕ್ಕೆ ಸಲ್ಲಿಸಲಾಗಿದ್ದ ಮೇಲ್ಮನವಿಗೆ ಸ್ಪಂದಿಸಿರುವ ಕೇಂದ್ರದ ಕಾರ್ಯದರ್ಶಿಗಳು,

1000608354

ಮಾರ್ಚ್ 16 ರಂದು ಈ ಪ್ರತ್ಯುತ್ತರ ನೀಡಿದ್ದಾರೆ. ಅಘನಾಶಿನಿ ನದಿ ಜೋಡಣೆ ಯೋಜನೆಯಿಂದ ಪಶ್ಚಿಮ ಘಟ್ಟದ ನೈಸರ್ಗಿಕ ಮತ್ತು ಭೌಗೋಳಿಕ ಪರಿಸರಕ್ಕೆ ಧಕ್ಕೆಯಾಗಲಿದೆ ಎಂದು ಆರೋಪಿಸಿ ಬೃಹತ್ ಜನಾಂದೋಲನ ರೂಪಿಸಲಾಗಿತ್ತು.

ಸುಮಾರು 25 ಸಾವಿರಕ್ಕೂ ಹೆಚ್ಚು ಕುಟುಂಬಗಳು ಈ ಯೋಜನೆಯನ್ನು ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆಕ್ಷೇಪಣಾ ಪತ್ರಗಳನ್ನು ಸಲ್ಲಿಸಿದ್ದವು. ಪಶ್ಚಿಮ ಘಟ್ಟವು ವಿಶ್ವ ಪರಂಪರೆಯ ತಾಣವಾಗಿರುವುದರಿಂದ, ಇಲ್ಲಿನ ಪರಿಸರ ಮೌಲ್ಯಗಳನ್ನು ರಕ್ಷಿಸಬೇಕೆಂದು ಯುನೆಸ್ಕೋಗೆ ಕಾನೂನಾತ್ಮಕ ಅಂಶಗಳೊಂದಿಗೆ ಮನವಿ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಶಿರಸಿ | ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ಜೀವ ಉಳಿಸಿದ ಪಯಾಜ್ (ಪಯ್ಯು) ಚೌಟಿ

ಯುನೆಸ್ಕೋ ನಿಲುವು ಮತ್ತು ಬೆಂಬಲ: ಪಶ್ಚಿಮ ಘಟ್ಟಗಳ ರಕ್ಷಣೆ ಮತ್ತು ಸಂರಕ್ಷಣೆಯ ವಿಷಯದಲ್ಲಿ ಯುನೆಸ್ಕೋ ಎಲ್ಲಾ ಹಂತಗಳಲ್ಲೂ ಬೆಂಬಲ ನೀಡಲು ಬದ್ಧವಾಗಿದೆ ಎಂದು ತನ್ನ ಪತ್ರದಲ್ಲಿ ತಿಳಿಸಿದೆ. ಅಲ್ಲದೆ, ತಾಂತ್ರಿಕ ಹಾಗೂ ಪರಿಸರ ವಿರೋಧಿ ಯೋಜನೆಗಳ ಕುರಿತು ರಾಷ್ಟ್ರೀಯ ಪ್ರಾಧಿಕಾರಗಳ ಗಮನ ಸೆಳೆಯಲು ಸೂಚಿಸಿದೆ.

1972ರ ವಿಶ್ವ ಪರಂಪರೆಯ ಸಮಾವೇಶದ ಶಿಫಾರಸಿನಂತೆ, ಸಾಂಸ್ಕೃತಿಕ ಮತ್ತು ನೈಸರ್ಗಿಕ ಪರಂಪರೆಯ ಆಸ್ತಿಗಳನ್ನು ರಕ್ಷಿಸುವ ಪ್ರಾಥಮಿಕ ಜವಾಬ್ದಾರಿ ಆಯಾ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲಿದೆ ಎಂಬುದನ್ನು ಯುನೆಸ್ಕೋ ನೆನಪಿಸಿದೆ.

ಪಶ್ಚಿಮ ಘಟ್ಟವನ್ನು “ವಿಶ್ವ ಪರಂಪರೆಯ ಆಸ್ತಿ” ಎಂದು ಉಲ್ಲೇಖಿಸಿರುವ ಯುನೆಸ್ಕೋ, ಈ ಭಾಗದ ಪರಿಸರ ರಕ್ಷಣೆಗಾಗಿ ಹೋರಾಟಗಾರರು ತೋರುತ್ತಿರುವ ಆಸಕ್ತಿ ಮತ್ತು ಪ್ರಯತ್ನಗಳನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದೆ. ಈ ಬೆಳವಣಿಗೆಯು ನದಿ ಜೋಡಣೆ ವಿರೋಧಿ ಹೋರಾಟಕ್ಕೆ ಹೊಸ ಆಯಾಮ ಮತ್ತು ಹೆಚ್ಚಿನ ಬಲ ನೀಡಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...