ಶಿರಸಿ | ವಸತಿ ಕಟ್ಟಡಕ್ಕೆ ಮಸೀದಿ ಹಣೆಪಟ್ಟಿ ಹಚ್ಚಿ ಅಶಾಂತಿ ಸೃಷ್ಟಿಸುವ ಯತ್ನ; ಬಿಜೆಪಿ ಮುಖಂಡರ ವಿರುದ್ಧ ಡಿವೈಎಸ್‌ಪಿಗೆ ದೂರು

Date:

ಶಿರಸಿ: ನಗರದ ಕಸ್ತೂರಿಬನಗರದಲ್ಲಿರುವ ಖಾಸಗಿ ವಸತಿ ಕಟ್ಟಡವೊಂದರ ಕುರಿತು ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿರಸಿ ತಾಲ್ಲೂಕು ಘಟಕವು ಇಂದು ಡಿವೈಎಸ್‌ಪಿ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

- Advertisement -

ಕಸ್ತೂರಿಬನಗರದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವು ಒಬ್ಬ ವ್ಯಕ್ತಿಗೆ ಸೇರಿದ ವಸತಿ ಗೃಹವಾಗಿದೆ. ಆದರೆ, ಬಿಜೆಪಿ ಮಂಡಲ ಅಧ್ಯಕ್ಷ ಆನಂದ್ ಸಾಲೇರಾ, ನಂದನ್ ಸಾಗರ್ ಹಾಗೂ ಹಿಂದೂ ಜಾಗರಣ ವೇದಿಕೆಯ ಕೆಲ ಸದಸ್ಯರು ಇದನ್ನು ‘ಮಸೀದಿ ನಿರ್ಮಾಣ’ ಎಂದು ಸುಳ್ಳು ಬಿಂಬಿಸುತ್ತಿದ್ದಾರೆ. ಯಾವುದೇ ಆಧಾರವಿಲ್ಲದೆ ಧಾರ್ಮಿಕ ಕಟ್ಟಡ ಎಂದು ಸುಳ್ಳು ಸುದ್ದಿ ಹರಡುವ ಮೂಲಕ ಶಾಂತಿಯುತವಾಗಿದ್ದ ಶಿರಸಿಯಲ್ಲಿ ಅಶಾಂತಿ ಸೃಷ್ಟಿಸಲು ಇವರು ವ್ಯವಸ್ಥಿತ ಸಂಚು ರೂಪಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕೇವಲ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವುದು ಮಾತ್ರವಲ್ಲದೆ, ಈ ಗುಂಪು ಶಿರಸಿಯ ಸಹಾಯಕ ಆಯುಕ್ತರು (AC) ಮತ್ತು ತಹಶೀಲ್ದಾರರ ಮೇಲೆ ಅನಗತ್ಯ ಒತ್ತಡ ಹೇರುತ್ತಿದೆ. ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಕಾನೂನುಬದ್ಧವಾಗಿ ನಡೆಯುತ್ತಿರುವ ಖಾಸಗಿ ಕಾಮಗಾರಿಯನ್ನು ತಡೆಯಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಸರ್ಕಾರಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಇವರು ಅಡ್ಡಿಪಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

1000379747

ಈ ಸಂದರ್ಭದಲ್ಲಿ ಮಾತನಾಡಿದ ಅಮ್ಜದ್ ಖಾನ್ ಪಠಾಣ್, “ಆಸ್ತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ದಾಖಲೆಗಳು ಮಾಲೀಕರ ಬಳಿ ಇವೆ. ವಾಸ್ತವ ಹೀಗಿದ್ದರೂ, ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ದ್ವೇಷ ಬಿತ್ತುವ ಮತ್ತು ಭಯದ ವಾತಾವರಣ ನಿರ್ಮಿಸುವ ಕೆಲಸ ನಡೆಯುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವ ಮತ್ತು ಸುಳ್ಳು ಮಾಹಿತಿಯ ಮೂಲಕ ಜನರನ್ನು ಪ್ರಚೋದಿಸುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅರಣ್ಯ ಭೂಮಿ-ಸಿಆರ್‌ಝಡ್ ಸಂಘರ್ಷ; ಜಿಲ್ಲೆಯ ಶೇ 86ರಷ್ಟು ಆಸ್ತಿಗಳಿಗೆ ಸಿಗದ ‘ಇ-ಸ್ವತ್ತು’ ಮಾನ್ಯತೆ

ಸುಳ್ಳು ಆರೋಪ ಮಾಡುತ್ತಿರುವ ಆನಂದ್ ಸಾಲೇರಾ ಹಾಗೂ ಬೆಂಬಲಿಗರ ವಿರುದ್ಧ ತಕ್ಷಣ ತನಿಖೆಯಾಗಬೇಕು, ಸಾರ್ವಜನಿಕ ಶಾಂತಿ ಭಂಗಕ್ಕೆ ಯತ್ನಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕು, ಅಧಿಕಾರಿಗಳಿಗೆ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಕಸ್ತೂರಿಬನಗರದ ಅಲ್ಪಸಂಖ್ಯಾತ ನಿವಾಸಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು, ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಎಸ್‌ಡಿಪಿಐನ ಪ್ರಮುಖ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...