ಶಿರಸಿ | SIR ನೆಪದಲ್ಲಿ ಮತದಾರರ ಹಕ್ಕು ಕಸಿಯುವ ಯತ್ನ ಖಂಡನೀಯ: ಪ್ರಸನ್ನ ಶೆಟ್ಟಿ

Date:

ಶಿರಸಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಪ್ರಸನ್ನ ಶೆಟ್ಟಿ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಪಕ್ಷ ವ್ಯಕ್ತಪಡಿಸುತ್ತಿರುವ ಆತಂಕವನ್ನು ಬಿಜೆಪಿ ನಾಯಕರು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧಿಯಲ್ಲ. ಆದರೆ ಮತದಾರರ ಹಕ್ಕುಗಳಿಗೆ ತೊಂದರೆಯಾಗುವ ರೀತಿಯಲ್ಲಿ ಪ್ರಕ್ರಿಯೆ ನಡೆಸುವುದಕ್ಕೆ ಮಾತ್ರ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಭಾರತದ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಮತದಾನದ ಹಕ್ಕು ನೀಡಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲೆಗಳ ಕೊರತೆ ಅಥವಾ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಬಡವರು, ಕಾರ್ಮಿಕರು, ಅಲ್ಪಸಂಖ್ಯಾತರು, ಗ್ರಾಮೀಣ ಪ್ರದೇಶದ ಜನರು ಹಾಗೂ ದುರ್ಬಲ ವರ್ಗಗಳ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಸಾಧ್ಯತೆಗಳ ಬಗ್ಗೆ ದೇಶದಾದ್ಯಂತ ಆತಂಕ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕಾನಸೂರ ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ: ಶಿಕ್ಷಕನ ವಿರುದ್ಧ ಗಂಭೀರ ಆರೋಪ, FIR ದಾಖಲು!

ಶಾಸಕ ಭೀಮಣ್ಣ ನಾಯ್ಕ ಹಾಗೂ ಮಾಜಿ ಸಚಿವ ಮಂಕಾಳ ವೈದ್ಯ ವ್ಯಕ್ತಪಡಿಸಿರುವ ಕಳವಳವು ಜನಸಾಮಾನ್ಯರ ಆತಂಕದ ಪ್ರತಿಬಿಂಬವಾಗಿದೆ. ಚುನಾವಣಾ ಆಯೋಗವು ಸಂಪೂರ್ಣ ಪಾರದರ್ಶಕವಾಗಿ ಹಾಗೂ ಯಾವುದೇ ಅರ್ಹ ಮತದಾರರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಬದಲು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಸುರಕ್ಷಿತವಾಗಿರುವುದನ್ನು ಖಚಿತಪಡಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಯಾರೊಬ್ಬರ ಹಕ್ಕೂ ಕಸಿಯಲ್ಪಡಬಾರದು ಎಂಬುದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವದ ಬಲವು ಮತದಾರರ ಭಾಗವಹಿಸುವಿಕೆಯಲ್ಲಿ ಅಡಗಿದೆ. ಆದ್ದರಿಂದ ಮತದಾರರ ಹಕ್ಕುಗಳನ್ನು ರಕ್ಷಿಸುವ ಹೋರಾಟವನ್ನು ಕಾಂಗ್ರೆಸ್ ಮುಂದುವರಿಸಲಿದೆ ಎಂದು ಪ್ರಸನ್ನ ಶೆಟ್ಟಿ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...