ಶಿರಸಿ | ಹುಲಿದೇವನಸರ ಬಳಿ ಗಟಾರಕ್ಕೆ ಇಳಿದ ಬಸ್: ಹೆದ್ದಾರಿ ಕಾಮಗಾರಿ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆಕ್ರೋಶ

Date:

ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹುಲಿದೇವನಸರ ಸಮೀಪ ಶುಕ್ರವಾರ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಗಂಭೀರ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

- Advertisement -

ಮಾಹಿತಿಯ ಪ್ರಕಾರ, ಬಸ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಗಟಾರಕ್ಕೆ ಇಳಿದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರು ತಕ್ಷಣವೇ ಬಸ್‌ನಿಂದ ಹೊರಬಂದರು. ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರಿಗೆ ಅಗತ್ಯ ನೆರವು ಒದಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಳೆಯ ಅಬ್ಬರ: ದೇವಿಮನೆ ಘಟ್ಟದಲ್ಲಿ ಭೂಕುಸಿತ, ಹಾರವಾಡದಲ್ಲಿ ಕಡಲ ಕೊರೆತ ತೀವ್ರ

ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದ್ದು, ಬಸ್‌ಗೆ ಮಾತ್ರ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಸುರಕ್ಷತಾ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಅಗತ್ಯ ಎಚ್ಚರಿಕೆ ಫಲಕಗಳು, ಬ್ಯಾರಿಕೇಡ್‌ಗಳು ಹಾಗೂ ಸುರಕ್ಷತಾ ಸೂಚನೆಗಳನ್ನು ಸಮರ್ಪಕವಾಗಿ ಅಳವಡಿಸದಿರುವುದರಿಂದ ವಾಹನ ಸವಾರರು ಅಪಾಯಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಪ್ರತಿದಿನ ಸಾವಿರಾರು ವಾಹನಗಳು ಈ ಹೆದ್ದಾರಿಯಲ್ಲಿ ಸಂಚರಿಸುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದರ ಜೊತೆಗೆ ಸುರಕ್ಷತಾ ವ್ಯವಸ್ಥೆಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈ ಘಟನೆ ಹೆದ್ದಾರಿ ಕಾಮಗಾರಿ ವೇಳೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದ್ದು, ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ...

ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕುಂಬಾರಗಡಿಗೆ...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...