ಶಿರಸಿ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಮುಕ್ತ ಅವಕಾಶ

Date:

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

- Advertisement -

ಈ ಆದೇಶವು ಡಿಸೆಂಬರ್ 30 ರಿಂದ ಜಾರಿಗೆ ಬರಲಿದ್ದು, ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪ್ರಸ್ತುತ ಈ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಜಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆಯ ಅಗತ್ಯತೆಯನ್ನು ಮನಗಂಡು, ಕೆಲವು ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

1000411264

ಈ ಆದೇಶದ ಅನ್ವಯ, ಸದರಿ ರಸ್ತೆಯಲ್ಲಿ ಕೇವಲ ಬಸ್‌ಗಳಿಗೆ ಮಾತ್ರ ಸಂಚರಿಸಲು ಅವಕಾಶವಿದ್ದು, ಇತರ ಯಾವುದೇ ಭಾರಿ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಳಲ್ಲಿ ಬಸ್‌ಗಳ ವೇಗಮಿತಿಯನ್ನು ಗಂಟೆಗೆ 20 ಕಿಲೋಮೀಟರ್‌ಗೆ ಸೀಮಿತಗೊಳಿಸಬೇಕು ಎಂದು ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಅಲ್ಲದೆ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಅಗತ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ. ಇನ್ನು ರಸ್ತೆ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಿಶೇಷ ಸೂಚನೆ ನೀಡಲಾಗಿದ್ದು, ರಸ್ತೆಯ ತಿರುವುಗಳಲ್ಲಿ ಹಾಗೂ ಅಗತ್ಯವಿರುವ ಕಡೆಗಳಲ್ಲಿ ವೇಗದ ಮಿತಿ ಫಲಕ ಮತ್ತು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈ ಮೂಲಕ ರಸ್ತೆ ಕಾಮಗಾರಿಯ ನಡುವೆಯೂ ಮಾರಿಕಾಂಬಾ ಜಾತ್ರೆಗೆ ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...