ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

Date:

ಶಿರಸಿ: ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಹಾಗೂ ದಲಿತ ಸಮುದಾಯದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ‘ಶುದ್ಧೀಕರಣ ಯಾಗ’ ನಡೆಸಿರುವುದನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಈ ಕುರಿತು ಹೇಳಿಕೆ ನೀಡಿರುವ ಅವರು, ಖರ್ಗೆ ಅವರು ಭಾಗವಹಿಸಿದ ಸ್ಥಳವನ್ನು ನಂತರ ‘ಶುದ್ಧೀಕರಿಸಬೇಕು’ ಎಂಬ ಮನೋಭಾವವನ್ನು ಪ್ರದರ್ಶಿಸಿರುವುದು ಅತ್ಯಂತ ಖಂಡನೀಯ ಹಾಗೂ ಇದು ಕೇವಲ ರಾಜಕೀಯ ವಿರೋಧವಲ್ಲ, ಬದಲಾಗಿ ದೇಶದ ಸಂವಿಧಾನಾತ್ಮಕ ಮೌಲ್ಯಗಳಿಗೆ ಹಿಡಿದ ಕನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಯಾರೇ ಆಗಲಿ, ವ್ಯಕ್ತಿಯ ಜಾತಿ, ಸಮುದಾಯ ಅಥವಾ ರಾಜಕೀಯ ಸಿದ್ಧಾಂತದ ಕಾರಣಕ್ಕೆ ಅವರು ಮುಟ್ಟಿದ ಸ್ಥಳ ‘ಅಶುದ್ಧ’ವಾಗುತ್ತದೆ ಎಂಬ ಕಲ್ಪನೆಯು ಸಮಾನತೆ ಮತ್ತು ಮಾನವ ಘನತೆಯನ್ನೇ ಗಂಭೀರವಾಗಿ ಪ್ರಶ್ನಿಸುವ ಕಲುಷಿತ ಮನಸ್ಥಿತಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮ ಎನ್ನುವುದು ಪ್ರತಿಯೊಬ್ಬರ ವೈಯಕ್ತಿಕ ನಂಬಿಕೆಯಾಗಿದ್ದರೂ, ಧರ್ಮದ ಹೆಸರಿನಲ್ಲಿ ಯಾವುದೇ ವ್ಯಕ್ತಿಯನ್ನು ಅಥವಾ ಸಮುದಾಯವನ್ನು ಕೀಳಾಗಿ ಕಾಣುವುದನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ, ಮಂಕಾಳ ವೈದ್ಯರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಗೌರವ ಹಾಗೂ ಸಮಾನ ಹಕ್ಕುಗಳನ್ನು ಕಲ್ಪಿಸಿಕೊಟ್ಟಿದೆ. ಇಂದು ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಸ್ಥಳವನ್ನು ‘ಶುದ್ಧೀಕರಿಸುವ’ ನೀಚ ಮನಸ್ಥಿತಿ ತೋರುವವರು, ನಾಳೆ ಸಮಾಜದ ಇನ್ಯಾರನ್ನು ‘ಅಶುದ್ಧ’ ಎಂದು ಕರೆಯಲಿದ್ದಾರೆ ಎಂದು ಪ್ರಸನ್ನ ಶೆಟ್ಟಿ ಪ್ರಶ್ನಿಸಿದ್ದಾರೆ.

ಈ ಘಟನೆಯು ಕೇವಲ ಖರ್ಗೆ ಅವರಿಗೆ ಮಾಡಿದ ಅವಮಾನ ಮಾತ್ರವಲ್ಲ, ಬದಲಾಗಿ ಶತಮಾನಗಳಿಂದ ನಡೆದುಬಂದ ಸಾಮಾಜಿಕ ಸಮಾನತೆಯ ಮಹಾ ಹೋರಾಟಕ್ಕೇ ಎಸಗಿದ ಅಪಮಾನವಾಗಿದೆ. ಬಿಜೆಪಿ ನಾಯಕತ್ವವು ಈ ಘಟನೆಯಿಂದ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಇದನ್ನು ಸ್ಪಷ್ಟವಾಗಿ ಖಂಡಿಸಬೇಕು ಎಂದು ಆಗ್ರಹಿಸಿರುವ ಅವರು, ಈ ಕೃತ್ಯದ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕಾನೂನುಬದ್ಧ ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಸದಾಕಾಲ ಸಂವಿಧಾನ, ಸಮಾನತೆ, ಸಹೋದರತ್ವ ಮತ್ತು ಮಾನವ ಘನತೆ ಎಂಬ ಉದಾತ್ತ ಮೌಲ್ಯಗಳ ಪರವಾಗಿ ಗಟ್ಟಿಯಾಗಿ ನಿಲ್ಲುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಶುದ್ಧೀಕರಿಸುವ’ ಅಂತಹ ಅಸಹ್ಯಕರ ಮನಸ್ಥಿತಿಯನ್ನು ಮೊದಲು ಶುದ್ಧೀಕರಿಸಿಕೊಳ್ಳಬೇಕಾದ ತೀವ್ರ ಅಗತ್ಯವಿದೆ ಎಂದು ಪ್ರಸನ್ನ ಶೆಟ್ಟಿ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...