ಶಿರಸಿ | UGC ಹೊಸ ನಿಯಮಾವಳಿ ಜಾರಿಗೆ ಆಗ್ರಹ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Date:

ಶಿರಸಿ: ವಿಶ್ವವಿದ್ಯಾಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಓಬಿಸಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯ ತಡೆಗಟ್ಟಲು ಹಾಗೂ ಸಮಾನತೆಯನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ರೂಪಿಸಿರುವ 2026ರ ಹೊಸ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ.) ಉತ್ತರ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

- Advertisement -

ಶಿರಸಿ ಉಪವಿಭಾಗಾಧಿಕಾರಿ ಚಂದ್ರಶೇಖರ ಅವರು ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಸುಳಿಯಲ್ಲಿ ಸಿಲುಕಿ ರೋಹಿತ್ ವೇಮುಲ, ಪಾಯಲ್ ತಡ್ವಿ ಮತ್ತು ದರ್ಶನ್ ಸೋಲಂಕಿಯಂತಹ ಪ್ರತಿಭಾವಂತ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದನ್ನು ಸಮಿತಿ ತೀವ್ರವಾಗಿ ಖಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2014 ರಿಂದ 2021ರ ಅವಧಿಯಲ್ಲಿ ಕೇಂದ್ರ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಇದು ‘ಸಾಂಸ್ಥಿಕ ಹತ್ಯೆ’ ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

2012ರ ಯುಜಿಸಿ ಕರಡು ನಿಯಮಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ಕಠಿಣ ಕ್ರಮಗಳಿದ್ದವು. ಆದರೆ ಪ್ರಸ್ತುತ 2026ರ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆತಂಕಕಾರಿ ವಿಷಯವಾಗಿದೆ.

ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಈ ತಡೆಯಾಜ್ಞೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು: UGC ತಂದಿರುವ 2026ರ ಸಮಾನತೆ ಉತ್ತೇಜಿಸುವ ನಿಯಮಾವಳಿಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ಕೂಡಲೇ ತೆರವುಗೊಳಿಸಬೇಕು, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾದ ಮತ್ತು ಕಠಿಣವಾದ ನಿಯಮಾವಳಿಗಳನ್ನು ಯುಜಿಸಿ ಹೊರಡಿಸಬೇಕು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?

ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ಮತ್ತು ಧರ್ಮ ಆಧಾರಿತ ಕಿರುಕುಳಗಳನ್ನು ತಡೆಯಲು ಸರ್ಕಾರ ಬದ್ಧತೆ ತೋರಬೇಕು, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಕೂಡಲೇ ಜಾರಿಗೆ ತರಬೇಕು. ಎಂದು ಸಮಿತಿಯು ತನ್ನ ಬೇಡಿಕೆಯನ್ನು ಸಲ್ಲಿಸಿದೆ.

ಮನವಿ ನೀಡುವ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಶಿವಾಜಿ ಬನವಾಸಿ, ಬಸವರಾಜ ಕೊಂಡ್ಲೇರ, ಚಂದ್ರಶೇಖರ ಹೊಸ ಕೊಪ್ಪ, ಮಂಜುನಾಥ ಚಲವಾದಿ. ದೇವರಾಜ ಚಲವಾದಿ, ರಮೇಶ್ ಇಸಳೂರು, ಮಂಜು ಕಾಳಂಗಿ, ಪರಶುರಾಮ ಸಿದ್ದಿ, ಸೋಮಶೇಖರ ಹಾಗೂ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...