ಶಿರಸಿ | ಸರ್ಕಾರಿ ಕಾಲೇಜಿನಲ್ಲಿ ವೇತನ ಭಾಗ್ಯಕ್ಕೆ ಡಿಜಿಟಲ್ ಗ್ರಹಣ: ಪ್ರಾಂಶುಪಾಲರ ನಿರ್ಲಕ್ಷ್ಯಕ್ಕೆ ಉಪನ್ಯಾಸಕರು ಹೈರಾಣ!

Date:

ಶಿರಸಿ: ಡಿಜಿಟಲ್ ತಂತ್ರಜ್ಞಾನದ ಯುಗದಲ್ಲಿ ಸಣ್ಣದೊಂದು ‘ಡಿಜಿಟಲ್ ಕೀ’ ಸಕ್ರಿಯಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದಾಗಿ, ಇಲ್ಲಿನ ಬನವಾಸಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಕಳೆದ ಎರಡು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

- Advertisement -

ಜಿಲ್ಲೆಯ ಅತಿದೊಡ್ಡ ಕಾಲೇಜು ಎಂಬ ಹೆಗ್ಗಳಿಕೆಯಿದ್ದರೂ, ಆಡಳಿತಾತ್ಮಕ ಎಡವಟ್ಟಿನಿಂದಾಗಿ ಸಿಬ್ಬಂದಿ ವರ್ಗದವರ ಬದುಕು ಬೀದಿಗೆ ಬಂದಂತಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ ಸುಮಾರು 2,100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಈ ಕಾಲೇಜಿನಲ್ಲಿ 21 ಖಾಯಂ ಉಪನ್ಯಾಸಕರು, 50ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನೂತನ ಪ್ರಾಂಶುಪಾಲರು ಅಧಿಕಾರ ವಹಿಸಿಕೊಂಡ ನಂತರ ವೇತನ ಪಾವತಿಗೆ ಅಗತ್ಯವಿರುವ ಉಪ ಖಜಾನೆಯ ‘ಡಿಜಿಟಲ್ ಕೀ’ ಸಕ್ರಿಯಗೊಳ್ಳದಿರುವುದೇ ಈ ಎಲ್ಲಾ ಅವಾಂತರಕ್ಕೆ ಕಾರಣ ಎನ್ನಲಾಗಿದೆ.

ಮೂಲಗಳ ಪ್ರಕಾರ, ಪ್ರಸ್ತುತ ಪ್ರಾಂಶುಪಾಲರು ತಮ್ಮ ಹಿಂದಿನ ಕಾಲೇಜಿನಲ್ಲಿ ಬಳಸುತ್ತಿದ್ದ ಡಿಜಿಟಲ್ ಕೀಯನ್ನು ಕಳೆದುಕೊಂಡಿದ್ದಾರೆ. ನಿಯಮದಂತೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಿಸಿ ಹೊಸ ಕೀ ಪಡೆಯಬೇಕಿದೆ. ಆದರೆ ಈ ನಿಟ್ಟಿನಲ್ಲಿ ಪ್ರಾಂಶುಪಾಲರು ತೋರುತ್ತಿರುವ ವಿಳಂಬ ನೀತಿ ಈಗ ಇಡೀ ಕಾಲೇಜಿನ ಸಿಬ್ಬಂದಿಯನ್ನು ಆರ್ಥಿಕ ಸಂಕಷ್ಟದ ಸುಳಿಗೆ ತಳ್ಳಿದೆ. ದಾಖಲೆಗಳಿಗೆ ಸಹಿ ಹಾಕಲು ಸಹ ಪ್ರಾಂಶುಪಾಲರು ಸತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಅತಿಥಿ ಉಪನ್ಯಾಸಕರ ಗೋಳು ಕೇಳುವವರಿಲ್ಲ: ಕಡಿಮೆ ವೇತನಕ್ಕೆ ದುಡಿಯುವ ಅತಿಥಿ ಉಪನ್ಯಾಸಕರಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲಕ್ಕೆ ಹಣ ಸಿಗದೆ ಮಕ್ಕಳ ವಿದ್ಯಾಭ್ಯಾಸ ಹಾಗೂ ದೈನಂದಿನ ಜೀವನ ನಿರ್ವಹಣೆ ಕಷ್ಟವಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ (CDC) ನಿಧಿಯ ಮೂಲಕ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ನೀಡಲು ಅವಕಾಶವಿದ್ದರೂ, ಪ್ರಾಂಶುಪಾಲರು ಅದಕ್ಕೂ ಆಸಕ್ತಿ ತೋರುತ್ತಿಲ್ಲ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಶಾಸಕರ ಮಧ್ಯಸ್ಥಿಕೆಗೆ ಆಗ್ರಹ: “ಸರ್ಕಾರ ವೇತನ ಬಿಡುಗಡೆ ಮಾಡಿದರೂ ಪ್ರಾಂಶುಪಾಲರ ದ್ವಂದ್ವ ನೀತಿಯಿಂದ ನಮಗೆ ಹಣ ಸಿಗುತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನಾವು ಬೋಧನೆ ಮುಂದುವರಿಸಿದ್ದೇವೆ, ಆದರೆ ನಮ್ಮ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ” ಎಂದು ನೊಂದ ಉಪನ್ಯಾಸಕರು ತಿಳಿಸಿದ್ದಾರೆ.

ಈ ಗಂಭೀರ ವಿಚಾರದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಭೀಮಣ್ಣ ನಾಯ್ಕ ಅವರು ಮಧ್ಯಪ್ರವೇಶಿಸಿ, ಕೂಡಲೇ ಈ ತಾಂತ್ರಿಕ ತೊಡಕನ್ನು ನಿವಾರಿಸಿ ವೇತನ ಕೊಡಿಸಬೇಕೆಂದು ಇಡೀ ಕಾಲೇಜು ಕುಟುಂಬ ಒತ್ತಾಯಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...