ಶಿರಸಿ | ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ‌ಯಾದ ಮಾರಿಕಾಂಬ ಕಾಲೇಜು ವಿದ್ಯಾರ್ಥಿನಿ

Date:

ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

ಇತ್ತೀಚೆಗೆ ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಾಚಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ಒಂದು ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. 50 ಮೀಟರ್ ಫ್ರೀ ಸ್ಟೈಲ್ ಹಾಗೂ 100 ಮೀಟರ್ ಫ್ರೀ ಸ್ಟೈಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನೂ ಗೆದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಇದನ್ನೂ ಓದಿ: ಉತ್ತರ ಕನ್ನಡ | ಪದವೀಧರ ಮತದಾರರ ಹೆಸರು ನೊಂದಾವಣಿ ಪ್ರಕ್ರಿಯೆ ಆರಂಭ

ಈ ಮೂಲಕ ಒಟ್ಟು ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗಳಿಸಿದ ಪ್ರಾಚಿ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಾಚಿಯ ಈ ಸಾಧನೆಗೆ ಶಿರಸಿಯ ಮಾರಿಕಾಂಬಾ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದಲ್ಲಿಯೂ ಅವರು ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...