ಶಿರಸಿ | ವಿವಾಹೇತರ ಸಂಬಂಧ; ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಂಗಣಮನೆ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.

- Advertisement -

ಮೃತನನ್ನು ಶಿಂಗಣಮನೆ (ಮುಕ್ರಿಗುಡ್ಡೆ) ನಿವಾಸಿ ಪರಮೇಶ್ವರ ಬಾಬು ನಾಯ್ಕ (32) ಎಂದು ಗುರುತಿಸಲಾಗಿದೆ. ಜೂನ್ 25ರ ಸಂಜೆ ಮೊಬೈಲ್ ಕರೆ ಬಂದ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ತೆರಳಿದ್ದ ಅವರು ಮರಳಿ ಬಾರದೇ ಇದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ಬಳಿಕ ಮನೆಯ ಸಮೀಪದ ಕಾಡಿನಲ್ಲಿ ರಕ್ತದ ಮಡುವಿನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹಾಗೂ ಡಿವೈಎಸ್ಪಿ ಗೀತಾ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ವಿಶೇಷ ತನಿಖಾ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಲಾಯಿತು.

ಪೊಲೀಸ್ ಶ್ವಾನದಳ ಹಾಗೂ ಮೊಬೈಲ್ ತಾಂತ್ರಿಕ ಮಾಹಿತಿಯ ನೆರವಿನಿಂದ ತನಿಖೆ ಆರಂಭಿಸಿದ ಪೊಲೀಸರಿಗೆ ಕೆಲವೇ ಗಂಟೆಗಳಲ್ಲಿ ಪ್ರಮುಖ ಸುಳಿವು ಸಿಕ್ಕಿತು. ಇದರ ಆಧಾರದ ಮೇಲೆ ಪರಮೇಶ್ವರ ತಿಮ್ಮಾ ನಾಯ್ಕ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕೊಲೆಯ ರಹಸ್ಯ ಹೊರಬಿದ್ದಿದೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ


​ಮೃತ ಪರಮೇಶ್ವರ ಬಾಬು ನಾಯ್ಕನ ಪತ್ನಿ ಅರ್ಪಿತಾ ಹಾಗೂ ಬಂಧಿತ ಆರೋಪಿ ಪರಮೇಶ್ವರ ತಿಮ್ಮಾ ನಾಯ್ಕ ನಡುವೆ ಅನೈತಿಕ ಸಂಬಂಧವಿತ್ತು. ಈ ವಿಷಯ ಮೃತನಿಗೆ ತಿಳಿದು ದಂಪತಿ ನಡುವೆ ಮತ್ತು ಆರೋಪಿಯೊಂದಿಗೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ದ್ವೇಷದಿಂದ ಪತ್ನಿ ಅರ್ಪಿತಾ ಮತ್ತು ಆಕೆಯ ಪ್ರಿಯಕರ ಸೇರಿ ಪರಮೇಶ್ವರನನ್ನು ಮುಗಿಸಲು ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ​ಪ್ರಮುಖ ಆರೋಪಿಯ ಪಕ್ಕಾ ಮಾಹಿತಿಯ ಬೆನ್ನಲ್ಲೇ ಪೊಲೀಸರು ಮೃತನ ಪತ್ನಿ ಅರ್ಪಿತಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆಕೆಯೂ ತಪ್ಪು ಒಪ್ಪಿಕೊಂಡಿದ್ದಾಳೆ. ಸದ್ಯ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮತ್ತು ಆತಂಕ ಮೂಡಿಸಿದ್ದ ಈ ಕೊಲೆ ಪ್ರಕರಣವನ್ನು ಕೇವಲ 24 ಗಂಟೆಗಳೊಳಗೆ ಭೇದಿಸಿರುವುದು ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ. ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತನಿಖಾ ತಂಡ, ಶ್ವಾನದಳ ಹಾಗೂ ತಾಂತ್ರಿಕ ತನಿಖೆಯ ಸಮನ್ವಯದಿಂದ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆಹಚ್ಚಿ ಬಂಧಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...