ಶಿರಸಿ | 526 ಅಂಕ ಪಡೆದರೂ ಫೇಲ್: ಅಂಧ ವಿದ್ಯಾರ್ಥಿನಿಗೆ ಪರೀಕ್ಷಾ ಮಂಡಳಿಯ ಅನ್ಯಾಯ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಾಧಿಕಾರದ ನಿರ್ಲಕ್ಷ್ಯದ ಎಡವಟ್ಟಿನಿಂದಾಗಿ, ಅಂಧ ವಿದ್ಯಾರ್ಥಿನಿಯೊಬ್ಬಳು ಎಲ್ಲಾ ಪರೀಕ್ಷೆಗಳಿಗೆ ಹಾಜರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಿ ಫೇಲ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೆಳಕಿಗೆ ಬಂದಿದೆ.

- Advertisement -

ನಗರದ ಇಂದಿರಾ ನಗರದ ಯುನಿಯನ್ ಉರ್ದು ಪ್ರೌಢಶಾಲೆಯ ಲೀಸಾ ಖಾನಮ್ ಈ ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿನಿ. ಅಂಧ ವಿದ್ಯಾರ್ಥಿನಿಯಾದ ಕಾರಣ ಈಕೆಗೆ ನಿಯಮದಂತೆ ವಿಷಯ ವಿನಾಯಿತಿ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಗಣಿತ ಮತ್ತು ವಿಜ್ಞಾನ ವಿಷಯಗಳ ಬದಲಿಗೆ ರಾಜ್ಯಶಾಸ್ತ್ರ (Political Science) ಮತ್ತು ಅರ್ಥಶಾಸ್ತ್ರ (Economics) ವಿಷಯಗಳಲ್ಲಿ ಪರೀಕ್ಷೆ ಬರೆಯಲು ಅನುಮತಿ ಪಡೆದಿದ್ದ ಲೀಸಾ, ಅದರಂತೆ ಎಲ್ಲಾ ಪರೀಕ್ಷೆಗಳನ್ನು ಅತ್ಯಂತ ಉತ್ಸಾಹದಿಂದ ಬರೆದಿದ್ದರು.

ಪ್ರಕಟವಾದ ಫಲಿತಾಂಶದಲ್ಲಿ ಲೀಸಾ ಖಾನಮ್ ಅದ್ಭುತ ಅಂಕಗಳನ್ನು ಗಳಿಸಿದ್ದಾರೆ. ಕನ್ನಡದಲ್ಲಿ 100, ಇಂಗ್ಲೀಷ್‌ನಲ್ಲಿ 92, ಅರ್ಥಶಾಸ್ತ್ರದಲ್ಲಿ 98 ಹಾಗೂ ರಾಜ್ಯಶಾಸ್ತ್ರದಲ್ಲಿ 92 ಅಂಕಗಳನ್ನು ಪಡೆದಿದ್ದಾರೆ. ಒಟ್ಟಾರೆ 526 ಅಂಕಗಳೊಂದಿಗೆ ಶೇ. 84.16 ರಷ್ಟು ಫಲಿತಾಂಶ ದಾಖಲಿಸಿದ್ದರೂ, ಸಮಾಜ ವಿಜ್ಞಾನ ವಿಷಯದಲ್ಲಿ ‘ಆಬ್ಸೆಂಟ್’ (ಗೈರುಹಾಜರಿ) ಎಂದು ತೋರಿಸಿರುವುದರಿಂದ ತಾಂತ್ರಿಕವಾಗಿ ಅವರು ಫೇಲ್ ಆಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ

ಅಂಧತ್ವದ ಸವಾಲುಗಳಿದ್ದರೂ ಕಷ್ಟಪಟ್ಟು ಪಾಠಗಳನ್ನು ಕೇಳಿಸಿಕೊಂಡು ಪರೀಕ್ಷೆ ಎದುರಿಸಿದ್ದೆ. ಎಲ್ಲಾ ಪರೀಕ್ಷೆಗಳಿಗೂ ಹಾಜರಾಗಿ ಬರೆದಿದ್ದರೂ, ಸಮಾಜ ವಿಜ್ಞಾನ ಪರೀಕ್ಷೆಗೆ ಬಂದಿಲ್ಲ ಎಂದು ತೋರಿಸಿರುವುದು ನನಗೆ ತುಂಬ ನೋವು ತಂದಿದೆ, ಎಂದು ಲೀಸಾ ಖಾನಮ್ ಅಳಲು ತೋಡಿಕೊಂಡಿದ್ದಾರೆ.

ಪರೀಕ್ಷಾ ಮಂಡಳಿಯ ಈ ಯಡವಟ್ಟಿನ ವಿರುದ್ಧ ಪೋಷಕರು ಮತ್ತು ಶಾಲಾ ಮಂಡಳಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಶಿಕ್ಷಣ ಇಲಾಖೆಗೆ ಈಗಾಗಲೇ ಎಲ್ಲಾ ಅಧಿಕೃತ ದಾಖಲೆಗಳನ್ನು ಸಲ್ಲಿಸಲಾಗಿದೆ. ಪ್ರಾಧಿಕಾರವು ಕೂಡಲೇ ತನ್ನ ತಪ್ಪನ್ನು ಸರಿಪಡಿಸಿ, ಪ್ರತಿಭಾವಂತ ಅಂಧ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...

ಉಡುಪಿ | ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ, ‘ಯುವ ರಂಗ ಸಂಗಮ’ ಪೋಸ್ಟರ್ ಬಿಡುಗಡೆ

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ...

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...