ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದರು.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ದಾರಿಹೋಕರು ಸಕ್ರಿಯವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಗಾಯಗೊಂಡವರನ್ನು ಕೂಡಲೇ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಿರಸಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಹೆದ್ದಾರಿಯ ಮಧ್ಯೆಯೇ ಅಪಘಾತ ನಡೆದಿದ್ದರಿಂದ ರಸ್ತೆಯ ಎರಡೂ ಬದಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
This video cannot be played in your browser. Open the video directly
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಾಜಿ ಶಾಸಕ ವಿ.ಎಸ್. ಪಾಟೀಲ್ ಮುಂದಿನ ನಡೆ ಏನು? ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ
ಇದರಿಂದಾಗಿ ಸುಮಾರು ಗಂಟೆಗಳ ಕಾಲ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಏರುಪೇರಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.





