ಶಿರಸಿ | ಗಮನ ಬೇರೆಡೆ ಸೆಳೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ನಾಲ್ವರ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ “ಶ್ರೀ ದುರ್ಗಾ ಜ್ಯುವೇಲರಿ ವರ್ಕ್ಸ್” ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರ ಗಮನವನ್ನು ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಶಿರಸಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ದಿನಾಂಕ 16/12/2025 ರಂದು ಸಂಜೆ 5:45 ರ ಸುಮಾರಿಗೆ ಬುರ್ಕಾ ಧರಿಸಿದ್ದ ಮೂವರು ಮಹಿಳೆಯರು ನಟರಾಜ ರಸ್ತೆಯಲ್ಲಿರುವ ರಾಜೇಶ್ ಗಣಪತಿ ಶೇಟ್ ಅವರಿಗೆ ಸೇರಿದ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಿವಿಧ ವಿನ್ಯಾಸದ ಝುಮಕಿ ಮತ್ತು ಓಲೆಗಳನ್ನು ತೋರಿಸುವಂತೆ ಕೇಳಿ ಮಾಲೀಕರ ಗಮನವನ್ನು ಬೇರೆಡೆ ಸೆಳೆದ ಈ ತಂಡ, ಅವರಿಗೆ ತಿಳಿಯದಂತೆ ಸುಮಾರು 13,38,000/- ರೂಪಾಯಿ ಮೌಲ್ಯದ 103.750 ಗ್ರಾಂ ಬಂಗಾರದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದರು.

ಈ ಕುರಿತು ಮಾಲೀಕರು ನೀಡಿದ ದೂರಿನನ್ವಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಅರಿತ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ತಾಂತ್ರಿಕ ವಿಭಾಗ ಮತ್ತು ಸ್ಥಳೀಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯ ಫಲವಾಗಿ,

ಈ ಸುದ್ದಿ ಓದಿದ್ದೀರಾ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ದಿನಾಂಕ 26/12/2025 ರಂದು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಅರ್ಷಿಯಾ @ ಖತೀಜಾ (37), ಸಲ್ಮಾ @ ಅಣ್ಣಿಮ್ಮ (35), ಭಾಷಾಸಾಬ್ (38) ಮತ್ತು ವಿಜಯನಗರ ಜಿಲ್ಲೆ ಹರಪನಳ್ಳಿಯ ಹಮೀದಾಭಿ (60) ಎಂಬುವವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡಿದ್ದು, ಅವರಿಂದ 28.078 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟು 3,84,090/- ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಶಿರಸಿ ಉಪ-ವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ, ಪಿಎಸ್‌ಐಗಳಾದ ನಾಗಪ್ಪ ಬಿ., ನಾರಾಯಣ ರಾಥೋಡ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಮತ್ತು ಕಾರವಾರ ಟೆಕ್ನಿಕಲ್ ಸೆಲ್ ತಂಡ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...