ಶಿರಸಿ | ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆಯರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Date:

ಶಿರಸಿ: ನಗರದ ನಟರಾಜ ರಸ್ತೆಯಲ್ಲಿರುವ “ಶ್ರೀ ದುರ್ಗಾ ಜ್ಯುವೇಲರಿ ವರ್ಕ್ಸ್” ಎಂಬ ಚಿನ್ನದ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾಧಾರಿ ಮಹಿಳೆಯರು ಸುಮಾರು 13.38 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

- Advertisement -

ದೇವಿಕೆರೆ ಪಡ್ತಿಗಲ್ಲಿ ನಿವಾಸಿ ರಾಜೇಶ್ ಗಣಪತಿ ಶೇಟ್ ಎಂಬುವವರು ಕಳೆದ 21 ವರ್ಷಗಳಿಂದ ಚಿಲುಮೆಕೆರೆ ಎದುರು ಈ ಆಭರಣದ ಅಂಗಡಿಯನ್ನು ನಡೆಸುತ್ತಿದ್ದಾರೆ. ಡಿಸೆಂಬರ್ 16ರಂದು ಸಂಜೆ ಇವರು ಎಂದಿನಂತೆ ವ್ಯಾಪಾರದಲ್ಲಿ ತೊಡಗಿದ್ದಾಗ, ಸುಮಾರು 5:45 ಗಂಟೆಗೆ ಬುರ್ಕಾ ಧರಿಸಿದ ಮೂವರು ಮಹಿಳೆಯರು ಅಂಗಡಿಗೆ ಪ್ರವೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆಭರಣಗಳನ್ನು ಖರೀದಿಸುವವರಂತೆ ನಟಿಸಿ, ವಿವಿಧ ಮಾದರಿಯ ಝುಮಕಿ ಹಾಗೂ ಓಲೆಗಳನ್ನು ತೋರಿಸುವಂತೆ ಮಾಲೀಕರನ್ನು ಕೇಳಿದ್ದಾರೆ.ವ್ಯಾಪಾರ ಮಾಡುವ ಭರದಲ್ಲಿದ್ದ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದ ಈ ಕಿಲಾಡಿ ಮಹಿಳೆಯರು, ಸಮಯ ಸಾಧಿಸಿ ತಮಗೆ ಬೇಕಾದ ಆಭರಣಗಳನ್ನು ಅತೀ ಚಾಕಚಕ್ಯತೆಯಿಂದ ಎಗರಿಸಿದ್ದಾರೆ.

ಸಂಜೆ 6:45ರ ಸುಮಾರಿಗೆ ಅಲ್ಲಿಂದ ನಿರ್ಗಮಿಸಿದ ನಂತರ ಕಳ್ಳತನವಾಗಿರುವುದು ಮಾಲೀಕರ ಗಮನಕ್ಕೆ ಬಂದಿದೆ. ಅಂದಾಜು 103.750 ಗ್ರಾಂ ತೂಕದ ವಿವಿಧ ಚಿನ್ನದ ಆಭರಣಗಳು ಕಾಣೆಯಾಗಿದ್ದು, ಇವುಗಳ ಒಟ್ಟು ಮೌಲ್ಯ 13,38,000/- ರೂಪಾಯಿ ಎಂದು ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಈ ಕುರಿತು ರಾಜೇಶ್ ಅವರು ಡಿಸೆಂಬರ್ 26ರಂದು ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಬಿ.ಎನ್.ಎಸ್ (BNS) ಸೆಕ್ಷನ್ 305ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...