ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

Date:

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ ಸಂಘಟನೆಯ ವತಿಯಿಂದ ಶಿರಸಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದಲ್ಲಿ ನಡೆದ ಈ ಹೋರಾಟವು ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರ್ಜುನ್ ಮಿಂಟಿ, ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಚುನಾವಣಾ ಸಂದರ್ಭದಲ್ಲಿ ದಲಿತರ ಪರ ಕಳಕಳಿ ವ್ಯಕ್ತಪಡಿಸುವ ರಾಜಕೀಯ ನಾಯಕರು, ಸಂಕಷ್ಟದ ಸಮಯದಲ್ಲಿ ಮಾತ್ರ ಕಣ್ಣುಮುಚ್ಚಿ ಕುಳಿತಿರುತ್ತಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಶಾಸಕ ಭೀಮಣ್ಣ ನಾಯ್ಕ್ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇಬ್ಬರೂ ಮುಖಂಡರು ಸಂತ್ರಸ್ತ ಕುಟುಂಬಕ್ಕೆ ಇದುವರೆಗೆ ಸಾಂತ್ವನ ಹೇಳಲು ಬಾರದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಶ್ವಾನಗಳನ್ನು ಹಿಡಿದು ಕಾಡಿಗೆ ಬಿಟ್ಟ ಆರೋಪ; ಇಐಡಿ ಪ್ಯಾರಿ ಕಾರ್ಖಾನೆಯ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದರೆ ಮುಂದಿನ ದಿನಗಳಲ್ಲಿ ಶಿರಸಿಯಿಂದ ಕಾರವಾರದವರೆಗೆ ‘ಕಾರವಾರ ಚಲೋ’ ಹೆಸರಿನಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಅರ್ಜುನ್ ಮಿಂಟಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದಲಿತ ಸಮುದಾಯದವರು, ಮಹಿಳೆಯರು ಹಾಗೂ ಭೀಮಗರ್ಜನೆ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಹಾಗೂ ಡಿವೈಎಸ್‌ಪಿ ಕಚೇರಿ ಎದುರು ಜಮಾಯಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿವೆಯಾ ಎಂಬ ಭಾವನೆ ಸ್ಥಳೀಯರಲ್ಲಿ ಮೂಡುತ್ತಿದೆ. ಅದಕ್ಕೆ ಕಾರಣ ಭೀಮ ಘರ್ಜನೆ ಸಂಘಟನೆ ಹಾಗೂ ಅರ್ಜುನ ಮಿಂಟಿ ಅವರ ಹೋರಾಟ ದಲಿತರು ಮತ್ತು ಹಿಂದುಳಿದವರ ಮೇಲೆ ಎಲ್ಲೆ ದೌರ್ಜನ್ಯ ನಡೆದರು ಸಂಘಟನೆ ಅವರ ಬೆನ್ನಿಗೆ ನಿಂತು ನ್ಯಾಯ ಕೊಡಿಸುವ ವರೆಗೆ ಹೋರಾಡುತ್ತದೆ. ಸದ್ಯ ಈ ಪ್ರಕರಣ‌ ಸ್ಥಳೀಯ ರಾಜಕೀಯ ಸಮೀಕರಣದ ಮೇಲೆ ಯಾವ ರೀತಿಯ ಪ್ರಭಾವ ಬೀಳಲಿದೆ ಎಂಬುದು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...