ಶಿರಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಗರಂ ಚರ್ಚೆ: ಶಿವರಾಮ ಹೆಬ್ಬಾರ್–ಸುನೀಲ್ ನಾಯ್ಕ ನಡುವೆ ವಾಗ್ವಾದ

Date:

ಶಿರಸಿ: ಇಲ್ಲಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯು ತೀವ್ರ ಚರ್ಚೆಗೆ ಸಾಕ್ಷಿಯಾಯಿತು. ಶಿರಸಿ-ಹಾವೇರಿ ರಸ್ತೆ ಕಾಮಗಾರಿ ವಿಳಂಬ ಹಾಗೂ ನೀರಾವರಿ ಯೋಜನೆಗಳ ಕುರಿತು ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ ಮತ್ತು ಶಾಸಕ ಶಿವರಾಮ್ ಹೆಬ್ಬಾರ್ ಅವರ ನಡುವೆ ಮಾತಿನ ಚಕಮಕಿ ನಡೆಯಿತು.

- Advertisement -

ಸಭೆಯಲ್ಲಿ ಪ್ರಮುಖವಾಗಿ ಶಿರಸಿ-ಹಾವೇರಿ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವುದರ ಬಗ್ಗೆ ಪ್ರಸ್ತಾಪಿಸಿದ ಸುನೀಲ್ ನಾಯ್ಕ, ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಯೋಜನೆಗಳ ವಿಳಂಬದ ಬಗ್ಗೆ ಅಸಮಾಧಾನ: 13 ವರ್ಷಗಳ ಹಿಂದೆ ಭೂಮಿ ಪೂಜೆ ನೆರವೇರಿ, ಉದ್ಘಾಟನೆಯಾಗಿ 4 ವರ್ಷ ಕಳೆದರೂ ಬನವಾಸಿ ಗ್ರಿಡ್‌ನಿಂದ ಇನ್ನೂ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ರೈತರ ಈ ಸಂಕಷ್ಟಕ್ಕೆ ಯಾರು ಹೊಣೆ?​

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಂಡ ಏತ ನೀರಾವರಿ ಯೋಜನೆಯಿಂದ ಇದುವರೆಗೆ ಒಂದು ಹನಿ ನೀರು ಕೂಡ ರೈತರಿಗೆ ತಲುಪಿಲ್ಲ.​ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಗಳೇ ಇಲ್ಲದ ಮೇಲೆ ಇದು ಯಾವ ರೀತಿಯ ಪ್ರಗತಿ ಪರಿಶೀಲನಾ ಸಭೆ? ಸಭೆಯ ಅರ್ಥ ಗೊತ್ತಿದೆಯೇ ಎಂದು ಅಧಿಕಾರಿಗಳಿಗೆ ಬೆವರಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಐವರು ರೌಡಿ ಶೀಟರ್‌ಗಳಿಗೆ 6 ತಿಂಗಳ ಗಡಿಪಾರು ಆದೇಶ

ಶಾಸಕರ ಸ್ಪಷ್ಟನೆ: ಈ ವೇಳೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಈ ವಿಷಯದಲ್ಲಿ ಸಂಸದರ ಮೂಲಕ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಶಾಸಕರಿಂದ ನಿರೀಕ್ಷಿತ ಉತ್ತರ ದೊರೆಯದ ಕಾರಣಕ್ಕೆ ಸುನೀಲ್ ನಾಯ್ಕ ಅವರು ಸಭೆಯಿಂದ ಹೊರನಡೆದ ಪ್ರಸಂಗವೂ ನಡೆಯಿತು. ಒಟ್ಟಾರೆಯಾಗಿ ಸಭೆಯು ಅಭಿವೃದ್ಧಿ ಕಾರ್ಯಗಳ ಕುರಿತಾದ ಪರ-ವಿರೋಧದ ಚರ್ಚೆಗಳೊಂದಿಗೆ ಮುಕ್ತಾಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...