ಶಿರಸಿ | ಸಂವಿಧಾನದ ಆಶಯಕ್ಕೆ ಬದ್ದವಾಗಿ ಕೆಲಸ ಮಾಡುವೆ: ಎಸ್‌ಪಿ ದೀಪನ್ ಎಂ ಎನ್

Date:

Advertisements

ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಭರವಸೆ ನೀಡಿದರು.

ಶಿರಸಿ ನಗರ ಪೊಲೀಸ್ ಠಾಣೆಗೆ ತಮ್ಮ ಮೊದಲ ಭೇಟಿ ನೀಡಿ ಮಾತನಾಡಿ, ಠಾಣಾ ಆವರಣದಲ್ಲಿ ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಏಕತೆ ಹಾಗೂ ಭಾವೈಕ್ಯತೆಯ ಸಂಕೇತವಾಗಿ ಸಸಿಗಳನ್ನು ನೆಡುವ ಮೂಲಕ ಮಹತ್ವದ ಸಂದೇಶ ಸಾರಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಶಿರಸಿ ಜ್ಯುವೆಲರಿ ಶಾಪ್‌ನಲ್ಲಿ ಕಳ್ಳತನ: ಆರೋಪಿಗಳು ಸೆರೆ, ಆಭರಣಗಳು ವಶ

Advertisements

ಅವರ ಈ ಸಾಂಕೇತಿಕ ಕಾರ್ಯಕ್ರಮವು ಪೊಲೀಸ್ ಇಲಾಖೆಯು ಕೇವಲ ಕಾನೂನು ಜಾರಿಗೊಳಿಸುವುದಲ್ಲದೆ, ಸಂವಿಧಾನದ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂಬುದನ್ನು ಸಾರಿತು.

ಈ ಸಂದರ್ಭದಲ್ಲಿ ಶಿರಸಿ ಉಪವಿಭಾಗದ ಡಿಎಸ್‌ಪಿ ಗೀತಾ ಪಾಟೀಲ್, ಶಿರಸಿ ವೃತ ನಿರೀಕ್ಷಕ ಶಶಿಕಾಂತ ವರ್ಮ ಹಾಗೂ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X