ಶಿರಸಿ | ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ, ಒರ್ವ ಪರಾರಿ

Date:

ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

- Advertisement -

ಬಂಧಿತರನ್ನು ಹಾವೇರಿ ಜಿಲ್ಲೆ ಹಾನಗಲ್‌ನ ಬಸವರಾಜ ಫಕೀರಪ್ಪ ಗೊಲ್ಲರ (38), ಹಾಗೂ ಸುಜಾತಾ ಬಸವರಾಜ್ ಗೊಲ್ಲರ (31) ಎಂದು ಗುರುತಿಸಲಾಗಿದೆ. ಆದರೆ, ಇನ್ನೊಬ್ಬ ಆರೋಪಿ ಪಾಂಡುರಂಗ ನಾರಾಯಣ ನಾಯ್ಕ (54) ಎಂಬಾತ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿರಸಿ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ. ಅವರ ನೇತೃತ್ವದಲ್ಲಿ ಪೊಲೀಸರ ತಂಡವು ನಿಲೇಕಣಿ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಮಹೀಂದ್ರಾ ಬೊಲೆರೋ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಾಹನದಲ್ಲಿದ್ದ 2 ಆಕಳು, 2 ಹೋರಿ ಕರು ಮತ್ತು 1 ಆಕಳು ಕರು ಸೇರಿ ಒಟ್ಟು 5 ಜಾನುವಾರುಗಳನ್ನು ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಬಸವರಾಜ ಗೊಲ್ಲರ ಮತ್ತು ಸುಜಾತಾ ಗೊಲ್ಲರ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಬೊಲೆರೋ ವಾಹನ ಮತ್ತು ಅಂದಾಜು 19,500 ರೂ. ಮೌಲ್ಯದ 5 ಜಾನುವಾರುಗಳನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಮಯ್ಯ ಪೂಜಾರಿ, ಹನುಮಂತ ಮಾಕಾಪುರ, ಚನ್ನಬಸಪ್ಪ ಕ್ಯಾರಕಟ್ಟಿ, ಸುನಿಲ್, ರಾಜಶೇಖರ್, ಹನುಮಂತ್ ಕಬಾಡಿ, ಜ್ಯೋತಿ ನಾಯಕ ಎಂ ಮತ್ತು ಸುದರ್ಶನ ನಾಯ್ಕ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...