ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

Date:

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ ಸಾವಿಗೆ ಕಾರಣವಾದ ಘಟನೆ ತಾಲೂಕಿನ ಮಳಲಗಾಂವ್ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ತಂದೆ ಮತ್ತು ಮಗನನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಮಳಲಗಾಂವ್ ಗ್ರಾಮದ ಶಿವಪ್ಪ ನಾಯ್ಕ (76) ಮತ್ತು ಅವರ ಪುತ್ರ ನಾಗರಾಜ್ ನಾಯ್ಕ (40) ವಶಕ್ಕೆ ಪಡೆದವರು. ತಮ್ಮ ಭತ್ತದ ಗದ್ದೆಯನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಗದ್ದೆಯ ಸುತ್ತ ತಂತಿ ಬೇಲಿ ಹಾಕಿದ್ದ ಇವರು, ಅದಕ್ಕೆ ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು ಎನ್ನಲಾಗಿದೆ. ಈ ವೇಳೆ ಬೇಲಿಗೆ ತಗುಲಿದ ಗಂಡಾನೆಯೊಂದು ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ವಿಷಯ ತಿಳಿದ ಬನವಾಸಿ ವೃತ್ತದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗದ್ದೆಯ ಬೇಲಿಗೆ ನೇರವಾಗಿ ವಿದ್ಯುತ್ ಸಂಪರ್ಕ ನೀಡಿರುವುದನ್ನು ತಂದೆ-ಮಗ ಒಪ್ಪಿಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬನವಾಸಿ ವಲಯ ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಡಿಸಿಎಫ್ ಸಂದೀಪ್ ಹಿಂದೂರಾವ್ ಸೂರ್ಯವಂಶಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಆನೆಯ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದೆ. ಇತ್ತೀಚಿನ ಒಂದು ತಿಂಗಳಿಂದ ಮುಂಡಗೋಡ ಮತ್ತು ಶಿರಸಿ ತಾಲೂಕುಗಳ ಗಡಿ ಭಾಗದಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಹಲವು ಕಡೆ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿನತ್ತ ಓಡಿಸಲು ಪ್ರಯತ್ನಿಸುತ್ತಿದ್ದರೂ ಅವು ಮತ್ತೆ ಕೃಷಿ ಜಮೀನುಗಳತ್ತ ಬರುತ್ತಿವೆ.

ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ಹರಿಸುವುದು ವನ್ಯಜೀವಿಗಳ ಜೀವಕ್ಕೆ ಅಪಾಯ ತಂದೊಡ್ಡುವುದರ ಜತೆಗೆ ಕಾನೂನು ಕ್ರಮಕ್ಕೂ ಕಾರಣವಾಗುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ರೈತರು ಸುರಕ್ಷಿತ ವಿಧಾನಗಳನ್ನು ಅನುಸರಿಸುವ ಅಗತ್ಯವಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....