ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಶಿರಸಿ: ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ (RPLI) ಯೋಜನೆಗಳ ಅಡಿಯಲ್ಲಿ ಏಜೆಂಟ್‌ಗಳು ಹಾಗೂ ಫೀಲ್ಡ್ ಆಫೀಸರ್‌ಗಳ ನೇಮಕಾತಿಗೆ ಸಂಬಂಧಿಸಿದ ಸಂದರ್ಶನ ಮತ್ತು ಆಯ್ಕೆ ಪ್ರಕ್ರಿಯೆ ನವೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿಯಲ್ಲಿ ನಡೆಯಲಿದೆ.

- Advertisement -

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವವಿವರ (ಬಯೋಡಾಟಾ), ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ಪ್ರತಿಯನ್ನು ತರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಶಿರಸಿ ಹೊಸ ಮಾರುಕಟ್ಟೆ ಅವರಣದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ PLI ಡೆವಲಪ್ಮೆಂಟ್ ಆಫೀಸರ್ (ಮೊ. 6362609961) ಅಥವಾ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಪಿ.ಎಲ್.ಐ ಮತ್ತು ಆರ್.ಪಿ.ಎಲ್.ಐ ಕುರಿತು ಮಾಹಿತಿ ಪಡೆಯಲು www.postallifeinsurance.gov.in ವೆಬ್‌ಸೈಟ್ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ನೇರ ಏಜೆಂಟ್ ಹುದ್ದೆಗೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟ್‌ರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ನಿವೃತ್ತ ಸೈನಿಕರು ಅಥವಾ ಪಂಚಾಯಿತಿ ಸದಸ್ಯರು ಸೇರಿದಂತೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ದೊರೆಯಲಿದೆ ಎಂದು ವಿಭಾಗದ‌ ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ. ಫೀಲ್ಡ್ ಆಫೀಸರ್ ಹುದ್ದೆಗೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ನಿವೃತ್ತ ನೌಕರರು ಮಾತ್ರ ಅರ್ಹರಾಗಿರುತ್ತಾರೆ.

ಈ ಸುದ್ದಿ ಓದಿದ್ದೀರಾ? 12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಆಯ್ಕೆಯಾದವರು 5,000 ರೂಪಾಯಿಗಳ ಭದ್ರತಾ ಠೇವಣಿಯನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ ಇರಿಸಬೇಕಾಗುತ್ತದೆ. ನಿಯಮಾವಳಿಯ ಪ್ರಕಾರ, ಆಯ್ಕೆಯಾದ ಏಜೆಂಟ್‌ಗಳಿಗೆ ಅವರ ವ್ಯವಹಾರದ ಪ್ರಮಾಣದ ಆಧಾರದ ಮೇಲೆ ಇಲಾಖೆಯಿಂದ ಕಮೀಶನ್ ನೀಡಲಾಗುತ್ತದೆ. ನಿಗದಿತ ಮಾಸಿಕ ವೇತನವಿಲ್ಲ.ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ ಅಥವಾ ಸಂಘಟನೆಯ ಏಜೆಂಟ್ ಆಗಿರಬಾರದೆಂದು ಶಿರಸಿ ಅಂಚೆ ವಿಭಾಗದ ಅಧೀಕ್ಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...