ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಮೇ 18ರಂದು ಏಜೆಂಟರ ನೇಮಕಾತಿಗೆ ನೇರ ಸಂದರ್ಶನ

Date:

ಭಾರತೀಯ ಅಂಚೆ ಇಲಾಖೆಯ ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ (RPLI) ನೇರ ಪ್ರತಿನಿಧಿಗಳು (Direct Agents) ಮತ್ತು ಫೀಲ್ಡ್ ಆಫೀಸರ್‌ಗಳ ಆಯ್ಕೆಗಾಗಿ ಮೇ 18ರಂದು ಸಂದರ್ಶನವನ್ನು ಆಯೋಜಿಸಲಾಗಿದೆ.

- Advertisement -


​ಅಂದು ಬೆಳಿಗ್ಗೆ 11 ಗಂಟೆಗೆ ಶಿರಸಿಯ ಹೊಸ ಮಾರುಕಟ್ಟೆ ಆವರಣದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ (Resume), ಇತ್ತೀಚಿನ ಭಾವಚಿತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅರ್ಹತೆ ಮತ್ತು ಮಾನದಂಡಗಳು: ನೇರ ಪ್ರತಿನಿಧಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ 18 ವರ್ಷ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಯುವಕರು, ಸ್ವಯಂ ಉದ್ಯೋಗಿಗಳು, ವಿಮಾ ಕಂಪನಿಗಳ ಮಾಜಿ ಏಜೆಂಟರು, ಅಂಗನವಾಡಿ ಮತ್ತು ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಸೈನಿಕರು ಹಾಗೂ ನಿವೃತ್ತ ಗ್ರಾಮ ಪಂಚಾಯತಿ ಸದಸ್ಯರಿಗೆ ಈ ನೇಮಕಾತಿಯಲ್ಲಿ ಅವಕಾಶವಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಾನವ ಹಕ್ಕುಗಳ ರಕ್ಷಣೆ ಅಧಿಕಾರಿಗಳ ಹೊಣೆ: ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್


​ಇನ್ನು ಫೀಲ್ಡ್ ಆಫೀಸರ್ ಹುದ್ದೆಗೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ನಿವೃತ್ತ ನೌಕರರು ಮಾತ್ರ ಅರ್ಹರಾಗಿರುತ್ತಾರೆ. ಈ ಹುದ್ದೆಗೆ ಆಯ್ಕೆಯಾದವರು 5,000 ರೂಪಾಯಿಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ (NSC) ಅಥವಾ ಕಿಸಾನ್ ವಿಕಾಸ ಪತ್ರದ (KVP) ರೂಪದಲ್ಲಿ ಭದ್ರತಾ ಠೇವಣಿಯಾಗಿ ಇಡಬೇಕಾಗುತ್ತದೆ.


ಗಮನಿಸಬೇಕಾದ ಅಂಶಗಳು: ಆಯ್ಕೆಯಾದ ಪ್ರತಿನಿಧಿಗಳಿಗೆ ಅವರು ಮಾಡುವ ವ್ಯವಹಾರಕ್ಕೆ ಅನುಗುಣವಾಗಿ ಇಲಾಖೆಯ ನಿಯಮದಂತೆ ಕಮಿಷನ್ ನೀಡಲಾಗುವುದು. ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಲ್ಲದೆ, ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಸಂಸ್ಥೆಗಳಲ್ಲಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿರಬಾರದು ಎಂದು ಪ್ರಕಟಣೆ ತಿಳಿಸಿದೆ.


​ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಶಿರಸಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳನ್ನು (ದೂರವಾಣಿ: 6362609961) ಸಂಪರ್ಕಿಸಬಹುದು ಅಥವಾ ಇಲಾಖೆಯ ಅಧಿಕೃತ ವೆಬ್‌ಸೈಟ್ www.postallifeinsurance.gov.in ಗೆ ಭೇಟಿ ನೀಡಬಹುದಾಗಿದೆ ಎಂದು ಶಿರಸಿ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...