ಶಿರಸಿ | ಕಸ್ತೂರಿ ರಂಗನ್ ವರದಿ ಜಾರಿಗೆ ತರುವುದಿಲ್ಲ: ಅರಣ್ಯ ಸಚಿವರ ಭರವಸೆ

Date:

ಶಿರಸಿ: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಸಿದ್ಧಪಡಿಸಲಾಗಿರುವ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುವುದರಿಂದ ಉತ್ತರ ಕನ್ನಡ ಜಿಲ್ಲೆಯ ರೈತರು, ಅರಣ್ಯವಾಸಿಗಳು, ಬುಡಕಟ್ಟು ಜನಾಂಗ ಹಾಗೂ ಗ್ರಾಮೀಣ ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವರದಿಯನ್ನು ಕೈಬಿಡುವಂತೆ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯ ಜನರು ಎದುರಿಸಬಹುದಾದ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಸುದೀರ್ಘವಾಗಿ ಚರ್ಚಿಸಿ, ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪಶ್ಚಿಮ ಘಟ್ಟ ಪ್ರದೇಶದ ಸುಮಾರು 59,949 ಚದರ ಕಿ.ಮೀ. ಪ್ರದೇಶವನ್ನು ಇಕೋ ಸೆನ್ಸಿಟೀವ್ ಏರಿಯಾ (ESA) ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆಯಿಂದ ಸ್ಥಳೀಯ ಜನರ ದೈನಂದಿನ ಜೀವನ, ಕೃಷಿ ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೆ ನಿರ್ಬಂಧ ಉಂಟಾಗುವ ಆತಂಕವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕಾಯುಕ್ತರ ಮಿಂಚಿನ ದಾಳಿ: ಕಾರವಾರ, ಶಿರಸಿಯ ನಗರಸಭೆ ಹಾಗೂ ಹಾಸ್ಟೆಲ್‌ಗಳಲ್ಲಿ ಕಡತಗಳ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ 604 ಹಳ್ಳಿಗಳು ಪ್ರಸ್ತಾವಿತ ವ್ಯಾಪ್ತಿಗೆ ಒಳಪಡುವ ಸಾಧ್ಯತೆಯಿದ್ದು, ಇದರಲ್ಲಿ ಶಿರಸಿ ತಾಲೂಕಿನ 125 ಹಾಗೂ ಸಿದ್ದಾಪುರ ತಾಲೂಕಿನ 103 ಹಳ್ಳಿಗಳು ಸೇರಿವೆ. ಇದರಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಅಲ್ಲದೆ, 20,000 ಚದರ ಮೀಟರ್‌ಗಿಂತ ಹೆಚ್ಚಿನ ನಿರ್ಮಾಣ ಚಟುವಟಿಕೆಗಳ ಮೇಲಿನ ನಿರ್ಬಂಧ ಸೇರಿದಂತೆ ವಿವಿಧ ನಿಯಮಗಳು ಸ್ಥಳೀಯರ ಅಭಿವೃದ್ಧಿ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯಾಗಬಹುದು. ಕೃಷಿ, ಸಣ್ಣ ಕೈಗಾರಿಕೆಗಳು ಹಾಗೂ ಇತರ ಜೀವನೋಪಾಯ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಆತಂಕವನ್ನು ಸಚಿವರ ಗಮನಕ್ಕೆ ತರಲಾಗಿದೆ.

ಕಸ್ತೂರಿ ರಂಗನ್ ವರದಿ ಸಿದ್ಧಪಡಿಸುವ ಸಂದರ್ಭದಲ್ಲಿ ಸ್ಥಳೀಯ ಜನರ ಅಭಿಪ್ರಾಯ ಹಾಗೂ ನೆಲಮಟ್ಟದ ವಾಸ್ತವಾಂಶಗಳಿಗೆ ಸಮರ್ಪಕ ಆದ್ಯತೆ ನೀಡಲಾಗಿಲ್ಲ. ಮುಖ್ಯವಾಗಿ ವೈಮಾನಿಕ (Aerial) ದತ್ತಾಂಶದ ಆಧಾರದ ಮೇಲೆ ಪ್ರದೇಶಗಳನ್ನು ಗುರುತಿಸಿರುವುದರಿಂದ, ಸ್ಥಳೀಯ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ವರದಿಯಲ್ಲಿ ಪ್ರತಿಬಿಂಬಿತವಾಗಿಲ್ಲ ಎಂಬ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ

ಮನವಿ ಹಾಗೂ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು, ಮಲೆನಾಡು ಭಾಗದ ಜನರ ಹಿತರಕ್ಷಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಜನಜೀವನಕ್ಕೆ ಮಾರಕವಾಗುವ ಹಾಗೂ ಅಭಿವೃದ್ಧಿಗೆ ತೊಡಕಾಗುವ ಕಸ್ತೂರಿ ರಂಗನ್ ವರದಿಯನ್ನು ಕೈಬಿಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಭೀಮಣ್ಣ ನಾಯ್ಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...