ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ; ಮತ್ತೋಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಶಿವರಾಂ ಹೆಬ್ಬಾರ್ ಬಣ!

Date:

ಶಿರಸಿ: ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಕೆ.ಡಿ.ಸಿ.ಸಿ. ಬ್ಯಾಂಕ್) ಆಡಳಿತ ಮಂಡಳಿಯ ಪ್ರತಿಷ್ಠಿತ ಚುನಾವಣೆಯಲ್ಲಿ ಮಾಜಿ ಸಚಿವ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನೇತೃತ್ವದ ಬಣವು ಸಚಿವ ಮಂಕಾಳ ವೈದ್ಯ ಬಣದ ವಿರುದ್ಧ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಅಂತಿಮ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳಿವೆ. ಕಳೆದ ಎರಡು ತಿಂಗಳಿನಿಂದ ತೀವ್ರ ಪೈಪೋಟಿ ಮತ್ತು ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಈ ಚುನಾವಣಾ ಪ್ರಕ್ರಿಯೆಯಲ್ಲಿ ಶನಿವಾರ 13 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

- Advertisement -

ಒಟ್ಟು 16 ನಿರ್ದೇಶಕರ ಸ್ಥಾನಗಳಿಗೆ ನಡೆದ ಈ ಸ್ಪರ್ಧೆಯಲ್ಲಿ, ಚುನಾವಣೆಗೂ ಮುನ್ನ ಮಂಕಾಳ ವೈದ್ಯ ಬಣದಿಂದ 2 (ಹೊನ್ನಾವರ-ವಿ.ಕೆ. ವಿಶಾಲ್, ಭಟ್ಕಳ-ಮಂಕಾಳ ವೈದ್ಯ) ಮತ್ತು ಶಿವರಾಮ ಹೆಬ್ಬಾರ್ ಬಣದಿಂದ 1 (ಅಂಕೋಲಾ-ಬೀರಣ್ಣ ಬೊಮ್ಮಯ್ಯ ನಾಯಕ) ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕಟಗೊಂಡ ಫಲಿತಾಂಶಗಳು: ಕುಮಟಾ: ಶಿವರಾಮ ಹೆಬ್ಬಾರ್ ಬಣದ ರಾಜಗೋಪಾಲ ಅಡಿ 9 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ವಿರುದ್ಧ ಗಜಾನನ ಪೈ 0, ಶ್ರೀಧರ ಭಾಗ್ವತ್ 6 ಮತಗಳನ್ನು ಪಡೆದಿದ್ದಾರೆ. ಹಳಿಯಾಳ: ಹೆಬ್ಬಾರ್ ಬಣದ ಎಸ್.ಎಲ್. ಘೋಟ್ನೇಕರ್ 9 ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ಪ್ರತಿಸ್ಪರ್ಧಿ ಸುಭಾಸ್ ಕೊರ್ವೇಕರ್ 4 ಮತ. ಜೋಯಿಡಾ: ಹೆಬ್ಬಾರ್ ಬಣದ ಕೃಷ್ಣ ದೇಸಾಯಿ 5 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಅವರ ವಿರುದ್ಧ ಪುರುಷೋತ್ತಮ ಕಾಮತ್ 4 ಮತಗಳನ್ನು ಪಡೆದಿದ್ದಾರೆ. ಮುಂಡಗೋಡ: ಹೆಬ್ಬಾರ್ ಬಣದ ಎಚ್.ಎಂ. ನಾಯ್ಕ 8 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಎಲ್.ಟಿ. ಪಾಟೀಲ್ 5 ಮತ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

ನ್ಯಾಯಾಲಯದ ವ್ಯಾಪ್ತಿಯಲ್ಲಿ ಫಲಿತಾಂಶ: ಇನ್ನುಳಿದ 9 ಕ್ಷೇತ್ರಗಳ ಮತ ಎಣಿಕೆ ನಡೆದಿದ್ದರೂ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಅವುಗಳ ಫಲಿತಾಂಶ ಪ್ರಕಟವನ್ನು ತಡೆ ಹಿಡಿಯಲಾಗಿದೆ. ಅವುಗಳಲ್ಲಿ ಪ್ರಮುಖವಾಗಿ: ಸಿದ್ದಾಪುರ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದ ಸೂಚನೆಯಂತೆ ಮುಂದೂಡಲಾಗಿದೆ. ಕೋರ್ಟ್ ಆದೇಶದ ಬಳಿಕ ಫಲಿತಾಂಶ ಪ್ರಕಟವಾಗಲಿರುವ ಕ್ಷೇತ್ರಗಳಲ್ಲಿ, ಹೆಬ್ಬಾರ್ ಬಣದ ಬೆಂಬಲಿಗರಾದ ಪ್ರಕಾಶ ಗುನಗಿ (ಕಾರವಾರ), ಶಿವರಾಮ ಹೆಬ್ಬಾರ್ (ಯಲ್ಲಾಪುರ), ಶಿರಸಿ ಟಿಎಂಎಸ್‌ ರವಿ ಹೆಗಡೆ ಹುಳಗೋಳ (ಮಾರ್ಕೆಟಿಂಗ್) ಮುಂಚೂಣಿಯಲ್ಲಿದ್ದಾರೆ. ಮಂಕಾಳ ವೈದ್ಯ ಬಣದಿಂದ ವಿಶ್ವನಾಥ ಭಟ್ ಕರ್ವ (ಔದ್ಯೋಗಿಕ ಸಹಕಾರ) ಮುನ್ನಡೆ ಕಾಯ್ದುಕೊಂಡಿದ್ದಾರೆ.

ನ್ಯಾಯಾಲಯದ ತೀರ್ಮಾನವು ಪ್ರಕಟಗೊಂಡ ನಂತರವೇ ಅಂತಿಮ ಫಲಿತಾಂಶ ಹೊರಬೀಳಲಿದೆ. ಆದರೆ ಪ್ರಸ್ತುತ ಲಭ್ಯವಿರುವ ಪ್ರಕಟಿತ ಹಾಗೂ ಮುಂಚೂಣಿ ಫಲಿತಾಂಶಗಳ ಪ್ರಕಾರ, ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರ ಬಣವು ಆಡಳಿತ ಮಂಡಳಿಯಲ್ಲಿ ಬಹುಮತ ಸಾಧಿಸಿ, ಬ್ಯಾಂಕಿನ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...