ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

Date:

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆನರಾ ಡಿಸಿಸಿ ಬ್ಯಾಂಕ್ (ಕೆಡಿಸಿಸಿ) ನಿರ್ದೇಶಕ ಸ್ಥಾನಗಳಿಗಾಗಿ ನಡೆಯಲಿರುವ ಚುನಾವಣೆ ಪ್ರಕ್ರಿಯೆ  ಸೋಮವಾರದಿಂದ ಆರಂಭಗೊಂಡಿದೆ. ಅಕ್ಟೋಬರ್ 25ರಂದು ನಡೆಯಲಿರುವ ಈ ಚುನಾವಣೆಗೆ ಮೊದಲ ದಿನವೇ ವಿವಿಧ ಕ್ಷೇತ್ರಗಳಿಂದ 16 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. ಒಟ್ಟು 16 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಅದರಲ್ಲಿ 11 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಯಾಗಿದೆ.

- Advertisement -

ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಅಂತಿಮ ದಿನಾಂಕವಾಗಿದ್ದು, ಸಮಯದ ಅಭಾವದ ಹಿನ್ನೆಲೆಯಲ್ಲಿ ಸಚಿವ ಮಂಕಾಳ ವೈದ್ಯ ಅವರ ಬಣದಿಂದ ಇಂದು ಆರು ಮಂದಿ ನಾಮಪತ್ರ ಸಲ್ಲಿಸಿದರು. ಸಚಿವ ಮಂಕಾಳ ವೈದ್ಯ, ಉಪಾಧ್ಯಕ್ಷ ಮೋಹನದಾಸ ನಾಯ್ಕ, ಮಾಜಿ ನಿರ್ದೇಶಕರಾದ ಸುರೇಶ ಚಂದ್ರ ಹೆಗಡೆ, ವಿಶ್ವನಾಥ ಭಟ್ಟ, ಟಿಎಸ್ಸೆಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹಾಗೂ ನಿರಂಜನ ಭಟ್ಟ (ಸಿದ್ದಾಪುರ) ಅವರುಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ವೇಳೆ, ಶಾಸಕ ಶಿವರಾಮ ಹೆಬ್ಬಾರ ಅವರ ಬಣದಿಂದಲೂ ನಾಮಪತ್ರ ಸಲ್ಲಿಕೆ ನಡೆಯುವ ಸಾಧ್ಯತೆಗಳಿದ್ದು, ಹೆಬ್ಬಾರ ಅವರು ಅಕ್ಟೋಬರ್ 15ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾಧಿಕಾರಿಯಾಗಿ ಸಹಾಯಕ ಆಯುಕ್ತ ಕಾವ್ಯರಾಣಿ ಅವರು ಕಾರ್ಯನಿರ್ವಹಿಸಲಿದ್ದು, ಕೆಡಿಸಿಸಿ ಬ್ಯಾಂಕ್ ಕಚೇರಿಯಲ್ಲೇ ಚುನಾವಣಾ ಕಚೇರಿ ಸ್ಥಾಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿ ಪಲ್ಟಿ; ನೂರಾರು ಲೀಟರ್ ಎಣ್ಣೆ ರಸ್ತೆ ಪಾಲು

ಅಂತಿಮ ಮತದಾರರ ಪಟ್ಟಿ ಪ್ರಕಟ – 633 ಮಂದಿ ಅರ್ಹರ ಮತದಾರರ ಪಟ್ಟಿ ಪ್ರಕಟ : ಈ ನಡುವೆ, ಕೆನರಾ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಶುಕ್ರವಾರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೊದಲು ಪ್ರಕಟಿಸಲಾಗಿದ್ದ 763 ಕರಡು ಮತದಾರರ ಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಹಿನ್ನೆಲೆಯಲ್ಲಿ, ಅಂತಿಮ ಪರಿಶೀಲನೆ ನಡೆಸಿದ ಬಳಿಕ 633 ಮತದಾರರನ್ನು ಅರ್ಹರೆಂದು ಘೋಷಿಸಲಾಗಿದೆ.

ಒಟ್ಟು 130 ಮತದಾರರನ್ನು ಅನರ್ಹರೆಂದು ಪರಿಗಣಿಸಲಾಗಿದೆ. ಇವರಲ್ಲಿ —ಕಾರವಾರದ 4, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ತಾಲೂಕುಗಳಿಂದ ತಲಾ 1, ಹೊನ್ನಾವರ ಮತ್ತು ಜೊಯಿಡಾದಿಂದ ತಲಾ 2, ಕನ್‌ಜ್ಯೂಮರ್ ಅಂಡ್ ಪ್ರೊಸೆಸಿಂಗ್ ವಿಭಾಗದಿಂದ 16, ಇಂಡಸ್ಟ್ರಿಯಲ್ ವಿಭಾಗದಿಂದ 7, ಕ್ರೆಡಿಟ್ ಬ್ಯಾಂಕ್ ಹಾಗೂ ಅರ್ಬನ್ ಬ್ಯಾಂಕ್ ವಿಭಾಗಗಳಿಂದ 62, ಇತರೆ ವಿಭಾಗಗಳಿಂದ 33 ಮತದಾರರನ್ನು ಅನರ್ಹರನ್ನಾಗಿ ಗುರುತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...