ಶಿರಸಿ | ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ; ನಗರದ ಹಲವು ಪ್ರಮುಖ ಬಡಾವಣೆಗಳು ಜಲಾವೃತ

Date:

ಶಿರಸಿ: ಭಾನುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ನಗರದ ಹಲವು ಬಡಾವಣೆಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.

- Advertisement -

ನಗರದ ಸಮೃದ್ಧಿ ನಗರದ ಚಂದ್ರ ಕಾಲೋನಿಯಲ್ಲಿ ಮಳೆ ನೀರು ರಸ್ತೆ ಹಾಗೂ ಮನೆಗಳ ಆವರಣಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಸಂಕಷ್ಟ ಎದುರಿಸಿದರು. ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ನೀರು ಹೊರಹೋಗದೇ ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ನಗರಸಭೆಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ದುಂಡಶಿ ನಗರ ಪ್ರದೇಶದಲ್ಲಿಯೂ ಮಳೆ ನೀರು ರಸ್ತೆಯಲ್ಲೇ ನಿಂತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲು ಕಷ್ಟಪಡುತ್ತಿದ್ದಾರೆ. ಅವೈಜ್ಞಾನಿಕ ಗಟಾರ ಕಾಮಗಾರಿಯೇ ಸಮಸ್ಯೆಗೆ ಕಾರಣವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹುತ್ಗಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜುನಾಥ ನಗರದ ಮೂರನೇ ಅಡ್ಡರಸ್ತೆಯಲ್ಲೂ ನೀರು ನಿಂತು ನಿವಾಸಿಗಳಿಗೆ ತೊಂದರೆ ಉಂಟಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಸಮರ್ಪಕ ಒಳಚರಂಡಿ ವ್ಯವಸ್ಥೆಯ ಕೊರತೆ ಹಾಗೂ ನಿರ್ವಹಣೆಯ ಅಭಾವದಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಬನವಾಸಿ ರಸ್ತೆ ಗೊಲಗೇರಿ ಓಣಿ ಕ್ರಾಸ್ ಭಾಗದಲ್ಲಿಯೂ ರಸ್ತೆ ಜಲಾವೃತಗೊಂಡಿದ್ದು, ಕೆಲ ಮನೆಗಳೊಳಗೂ ನೀರು ನುಗ್ಗಿದ ವರದಿಯಾಗಿದೆ. ಸರಿಯಾದ ನೀರು ಹರಿವಿನ ವ್ಯವಸ್ಥೆ ಕಲ್ಪಿಸದಿರುವುದರಿಂದ ಮಳೆಗಾಲದಲ್ಲಿ ಸಮಸ್ಯೆ ಮರುಕಳಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಗರದ ವಿವಿಧ ಭಾಗಗಳಲ್ಲಿ ರಾಜಕಾಲುವೆಗಳ ಅತಿಕ್ರಮಣ, ಅಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ನಿರ್ವಹಣೆಯ ಕೊರತೆಯಿಂದ ಮಳೆ ನೀರು ಸರಾಗವಾಗಿ ಹರಿಯದೇ ಸಮಸ್ಯೆ ಹೆಚ್ಚಾಗುತ್ತಿದೆ. ಸ್ವಚ್ಛತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವಿವಿಧ ಯೋಜನೆಗಳು ಜಾರಿಯಲ್ಲಿದ್ದರೂ ನಗರದಲ್ಲಿ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದ್ದು, ಸಂಬಂಧಿತ ಇಲಾಖೆ ಹಾಗೂ ಜನಪ್ರತಿನಿಧಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...