ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

Date:

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಧರ್ಮದರ್ಶಿ ಮಂಡಳಿಗೆ ಐವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿರುವ ಈ ದೇವಸ್ಥಾನದ ಆಡಳಿತ ಮಂಡಳಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳನ್ನು ನ್ಯಾಯಾಧೀಶರು ಸಂದರ್ಶನದ ಮೂಲಕ ಅಂತಿಮಗೊಳಿಸಿದ್ದು, ಶನಿವಾರ ಆಯ್ಕೆ ಪಟ್ಟಿ ಪ್ರಕಟವಾಗಿದೆ.

- Advertisement -

ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಪ್ರತಿ ಐದು ವರ್ಷಗಳಿಗೊಮ್ಮೆ ಧರ್ಮದರ್ಶಿಗಳನ್ನು ನೇಮಕ ಮಾಡುವ ಪದ್ಧತಿ ಇದೆ. ಶಿರಸಿ ಸುತ್ತಮುತ್ತಲಿನ 47 ಗ್ರಾಮಗಳ ನಿವಾಸಿಗಳಿಗೆ ಧರ್ಮದರ್ಶಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಈ ಬಾರಿ ಸುಮಾರು 250ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದರು. ಐದು ಸ್ಥಾನಗಳಿಗೆ ನೂರಾರು ಅರ್ಜಿಗಳು ಬಂದಿದ್ದರಿಂದ ಆರಂಭದಿಂದಲೇ ಭಾರೀ ಕುತೂಹಲ ಹಾಗೂ ಪೈಪೋಟಿ ಕಂಡುಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನೂತನ ಧರ್ಮದರ್ಶಿಗಳಾಗಿ ನಿವೃತ್ತ ಇಂಜಿನಿಯರ್ ವಿನಾಯಕ ಎಸ್. ಶೇಟ್, ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ಅರ್ಚನಾ ರಾಘವೇಂದ್ರ ಹೊನ್ನಾವರ, ನಿವೃತ್ತ ಖಜಾನೆ ಅಧಿಕಾರಿ ರವಿ ಬೆಳ್ಳಿಮನೆ, ನಿವೃತ್ತ ಸೈನಿಕ ಕೇಶವ ಜಿ. ಹೆಗಡೆ ಹಾಗೂ ಕೆಡಿಸಿಸಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಅಶೋಕ ಎಸ್. ಪವಾರ್ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ

ಈ ಬಾರಿ ಧರ್ಮದರ್ಶಿ ಹುದ್ದೆಗೆ ರಾಜಕಾರಣಿಗಳು, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಉದ್ಯಮಿಗಳು, ನಿವೃತ್ತ ಸರ್ಕಾರಿ ನೌಕರರು, ದೇವಸ್ಥಾನದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು ಹಾಗೂ ಈ ಹಿಂದೆ ಧರ್ಮದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದವರೂ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವರು ಅರ್ಜಿ ಸಲ್ಲಿಸಿದ್ದರು. ಕೆಲ ಅಭ್ಯರ್ಥಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪರ-ವಿರೋಧದ ಚರ್ಚೆಗಳು ನಡೆದಿದ್ದವು.

ಜಿಲ್ಲಾ ನ್ಯಾಯಾಧೀಶರು ಅರ್ಜಿಗಳ ಪರಿಶೀಲನೆ ನಡೆಸಿ, ಅಭ್ಯರ್ಥಿಗಳ ಸಂದರ್ಶನದ ಆಧಾರದ ಮೇಲೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆಯ್ಕೆಯಾದ ಐವರು ಧರ್ಮದರ್ಶಿಗಳ ಪೈಕಿ ಒಬ್ಬರನ್ನು ಅಧ್ಯಕ್ಷರಾಗಿ ಹಾಗೂ ಮತ್ತೊಬ್ಬರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತದೆ. ದೇವಸ್ಥಾನದ ಅಭಿವೃದ್ಧಿ ಯೋಜನೆಗಳ ರೂಪುರೇಷೆ ಸಿದ್ಧಪಡಿಸುವುದು, ದೈನಂದಿನ ಪೂಜೆ-ಪುನಸ್ಕಾರಗಳ ಮೇಲುಸ್ತುವಾರಿ ವಹಿಸುವುದು, ಆಡಳಿತಾತ್ಮಕ ನಿರ್ವಹಣೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಧರ್ಮದರ್ಶಿ ಮಂಡಳಿ ನಿರ್ವಹಿಸಬೇಕಾಗುತ್ತದೆ.

ಇದಲ್ಲದೆ, ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವವನ್ನು ಸುಗಮವಾಗಿ ಆಯೋಜಿಸುವುದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುವುದು ನೂತನ ಆಡಳಿತ ಮಂಡಳಿಯ ಪ್ರಮುಖ ಹೊಣೆಗಾರಿಕೆಯಾಗಿದೆ. ನೂತನವಾಗಿ ಆಯ್ಕೆಯಾದ ಧರ್ಮದರ್ಶಿಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತ ಆಡಳಿತ ನೀಡುವ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಬೇಕು ಎಂಬುದು ಭಕ್ತರು ಹಾಗೂ ಸಾರ್ವಜನಿಕರ ಆಶಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...